ಕಲಬುರಗಿ: ಪಾಕಿಸ್ತಾನ ಹಾಗೂ ಐಸಿಸ್ ಉಗ್ರ ಸಂಘಟನೆಯೊಂದಿಗೆ ನಿರಂತರ ಸಂಪರ್ಕ ಹೊಂದಿದ್ದ ಆರೋಪದ ಮೇಲೆ ಉತ್ತರ ಪ್ರದೇಶದ ಎಟಿಎಸ್ ತಂಡ ಇಬ್ಬರು ಶಂಕಿತರನ್ನು ಕಲಬುರಗಿಯಲ್ಲಿ ವಶಕ್ಕೆ ಪಡೆದಿದೆ. ಉತ್ತರ ಪ್ರದೇಶ ಮೂಲದ ಮೊಹಮ್ಮದ್ ಸಮೀರ್ ಹಾಗೂ ಸಲ್ಮಾನ್ ಅವರನ್ನು ಮಾಲಗತ್ತಿ ಮತ್ತು ಉಪಳಾಂವ್ ಗ್ರಾಮದ ಹೊರವಲಯದಲ್ಲಿ ವಶಕ್ಕೆ ಪಡೆಯಲಾಗಿದೆ. ಇಬ್ಬರೂ ಬೀಫ್ ರಫ್ತು ಮಾಡುವ ಫೇರ್ ಎಕ್ಸ್‌ಪೋರ್ಟ್ಸ್ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ವಾಟ್ಸಾಪ್ ಕರೆ ಹಾಗೂ ಫೇಸ್‌ಬುಕ್ ಮೂಲಕ ಪಾಕಿಸ್ತಾನ ಮತ್ತು ಐಸಿಸ್ ಸಂಪರ್ಕ ಹೊಂದಿದ್ದ ಆರೋಪವಿದ್ದು, ಸಮೀರ್ ಕೊಠಡಿಯಲ್ಲಿ ಕೆಲವು ಮ್ಯಾಪ್‌ಗಳು ಪತ್ತೆಯಾಗಿವೆ. ಸಾಮಾಜಿಕ ಜಾಲತಾಣಗಳ ಮೇಲ್ವಿಚಾರಣೆ ವೇಳೆ ಪ್ರಕರಣ ಬೆಳಕಿಗೆ ಬಂದಿದ್ದು, ಇಬ್ಬರನ್ನೂ ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸಲಾಗುತ್ತಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

