ಧಾರವಾಡ: ರೀಲ್ಸ್ ನೋಡಬೇಡ ಎಂದು ತಾಯಿ ಬುದ್ಧಿವಾದ ಹೇಳಿದ್ದಕ್ಕೆ ಮನನೊಂದ 20 ವರ್ಷದ ಯುವತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಟಬಾಗಿ ಗ್ರಾಮದಲ್ಲಿ ನಡೆದಿದೆ. ಮೃತಳನ್ನು ಮೇಘಾ ಗೂಬ್ಬನ್ನವರ್ ಎಂದು ಗುರುತಿಸಲಾಗಿದೆ. ಮೇಘಾ ಖಾಸಗಿ ಕಾಲೇಜಿನಲ್ಲಿ ಡಿಎಡ್ ವ್ಯಾಸಂಗ ಮಾಡುತ್ತಿದ್ದಳು. ಮೊಬೈಲ್‌ನಲ್ಲಿ ದಿನವಿಡೀ ರೀಲ್ಸ್ ನೋಡುತ್ತಿದ್ದ ಹಿನ್ನೆಲೆಯಲ್ಲಿ ಪೋಷಕರು ಬುದ್ಧಿವಾದ ಹೇಳಿದ್ದರು. ಇದರಿಂದ ಮನನೊಂದು ಆಕೆ ದುಡುಕಿನ ನಿರ್ಧಾರ ಕೈಗೊಂಡಿದ್ದಾಳೆ ಎನ್ನಲಾಗಿದೆ. ಗರಗ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಗಳನ್ನು ಕಳೆದುಕೊಂಡ ಪೋಷಕರು ಆಘಾತಕ್ಕೊಳಗಾಗಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

