ಉಡುಪಿ: ಅಧಿಕ ಬಡ್ಡಿ ದರದಲ್ಲಿ ಸಾಲ ನೀಡಿ, ಕಂತಿನ ಹಣ ಬಾಕಿ ಉಳಿದಾಗ ಸಾರ್ವಜನಿಕರಿಗೆ ಕಿರುಕುಳ ನೀಡಿದ ಆರೋಪದಡಿ ಸಾನಿಧ್ಯ ಫೈನಾನ್ಸ್‌ನ ಮೂವರನ್ನು ಬ್ರಹ್ಮಾವರ ಪೊಲೀಸರು ಬಂಧಿಸಿದ್ದಾರೆ. ಕುಂಜಾಲಿನಲ್ಲಿ ಸಾಲದ ಕಂತು ಬಾಕಿ ಉಳಿದ ಹಿನ್ನೆಲೆಯಲ್ಲಿ ಗಣೇಶ್ ಗಾಣಿಗ ಅವರ ಮೋಟಾರ್‌ಸೈಕಲ್‌ನ್ನು ಬಲವಂತವಾಗಿ ತೆಗೆದುಕೊಂಡು ಹೋಗಿ, ಜಾಮೀನುದಾರ ರಾಜೇಶ್ ನಾಯ್ಕ್ ಅವರಿಗೆ ಹಲ್ಲೆ ನಡೆಸಿದ ಆರೋಪ ಕೇಳಿಬಂದಿದೆ. ಈ ಸಂಬಂಧ ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಂದೀಪ್ ಶೆಟ್ಟಿ ಹಾಗೂ ವಿಜೀತ್ ಶೆಟ್ಟಿ ಅವರನ್ನು ಆ.6ರಂದು ಬಂಧಿಸಲಾಗಿದ್ದು, ಮತ್ತೊಬ್ಬ ಆರೋಪಿ ಸಂಪತ್‌ನನ್ನು ಆ.13ರಂದು ಬಂಧಿಸಲಾಗಿದೆ. ಆರೋಪಿಗಳು ತೆಗೆದುಕೊಂಡು ಹೋಗಿದ್ದ ಬೈಕ್ ಹಾಗೂ ಕೃತ್ಯಕ್ಕೆ ಬಳಸಿದ್ದ ಕಾರನ್ನು ಪೊಲೀಸರು ವಶಕ್ಕೆ ಪಡೆದು ತನಿಖೆ ಮುಂದುವರಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

