ಮಂಗಳೂರು: ನಗರ ಹೊರವಲಯದ ವಳಚ್ಚಿಲ್ ಬಳಿಯ ಹೊಸ ಪೆಟ್ರೋಲ್ ಪಂಪ್ ಎದುರು ಕಾರೊಂದು ಬೈಕ್‌ಗೆ ಡಿಕ್ಕಿ ಹೊಡೆದು ಪರಾರಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರನ್ನು ಸೂರಲ್ಪಾಡಿಯ ಹ್ಯಾರಿಸ್ ಎಂದು ಗುರುತಿಸಲಾಗಿದೆ. ರಾತ್ರಿ 10ರ ಸುಮಾರಿಗೆ ಘಟನೆ ನಡೆದಿದ್ದು, ಕಾರಿನ ಡಿಕ್ಕಿಯ ರಭಸಕ್ಕೆ ಬೈಕ್ ಸವಾರ ದೂರಕ್ಕೆ ಎಸೆಯಲ್ಪಟ್ಟು ತೀವ್ರ ಗಾಯಗೊಂಡು ಮೃತಪಟ್ಟಿದ್ದಾರೆ. ಘಟನೆ ಕುರಿತು ಕಂಕನಾಡಿ ಟ್ರಾಫಿಕ್ ಪೊಲೀಸರು ಅಜಾಗರೂಕ ಚಾಲನೆ ಹಾಗೂ ಅಪಘಾತ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

