Breaking News

ಲಂಚದ ಹಣ ಕೈಸೇರುತ್ತಿದ್ದಂತೆ ರೇಡ್; ಲೋಕಾಯುಕ್ತ ಬಲೆಗೆ ಬಿದ್ದ ಪಿಎಸ್‌ಐ ಮಂಜುನಾಥ್!

ಹಾಸನ ಜಿಲ್ಲೆಯ ಹಳೇಬೀಡು ಪೊಲೀಸ್ ಠಾಣೆಯ ಸಬ್‌ಇನ್‌ಸ್ಪೆಕ್ಟರ್‌ ಮಂಜುನಾಥ್ ಅವರು ₹20 ಸಾವಿರ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಘಟ್ಟದಹಳ್ಳಿ ಗ್ರಾಮದ ಸಂತೋಷ್ ಎಂಬುವವರ ಕೆಲಸ ಮಾಡಿಕೊಡಲು ಪಿಎಸ್‌ಐ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಇದರಿಂದ ಬೇಸತ್ತ ಸಂತೋಷ್ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ದೂರು ಆಧರಿಸಿ ಕಾರ್ಯಾಚರಣೆ ನಡೆಸಿದ ಲೋಕಾಯುಕ್ತ ಪೊಲೀಸರು, ಸಂತೋಷ್ ಅವರಿಂದ ₹20 ಸಾವಿರ ಪಡೆಯುತ್ತಿದ್ದ ವೇಳೆ ಮಂಜುನಾಥ್ ಅವರನ್ನು ರೆಡ್‌ಹ್ಯಾಂಡ್ ಆಗಿ ವಶಕ್ಕೆ ಪಡೆದಿದ್ದಾರೆ. ಲಂಚದ ಹಣ ಜಪ್ತಿ ಮಾಡಲಾಗಿದ್ದು, ಭ್ರಷ್ಟಾಚಾರ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿ ಮುಂದಿನ ಕ್ರಮ ಕೈಗೊಳ್ಳಲಾಗಿದೆ.

Share News

About BigTv News

Check Also

ಅಪ್ರಾಪ್ತ ವಯಸ್ಕ ಬಾಲಕಿ ಮೇಲಿನ ದೌರ್ಜನ್ಯ ಕೇಸ್: ಗ್ರಾಮದಲ್ಲಿ ಉದ್ವಿಗ್ನ ವಾತಾವರಣ, ಆರೋಪಿ ಮನೆ ಮೇಲೆ ದಾಳಿ

ಮುಂಡಗೋಡ: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಗರ್ಭಿಣಿಯಾಗಿಸಿದ ಆರೋಪದ ಮೇಲೆ 65 ವರ್ಷದ ವೃದ್ಧನನ್ನು ಪೊಲೀಸರು ಬಂಧಿಸಿದ್ದಾರೆ. …

Leave a Reply

Your email address will not be published. Required fields are marked *