Breaking News

ಬಸ್‌ನಲ್ಲಿ ಮಹಿಳೆಗೆ ಕಿರುಕುಳ ನೀಡಿದ ಕಿಡಿಗೇಡಿ ಅಂಕಲ್​​​​ಗೆ ಧರ್ಮದೇಟು

ಕೋಲಾರದಿಂದ ಬಂಗಾರಪೇಟೆಗೆ ತೆರಳುತ್ತಿದ್ದ ಸಾರಿಗೆ ಬಸ್‌ನಲ್ಲಿ ಮಹಿಳೆಯೊಬ್ಬರಿಗೆ ಅಸಭ್ಯವಾಗಿ ವರ್ತಿಸಿದ ವ್ಯಕ್ತಿಗೆ ಮಹಿಳೆ ಹಾಗೂ ಸಹಪ್ರಯಾಣಿಕರು ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ. ಮಹಿಳೆಯ ಪಕ್ಕದಲ್ಲಿ ಕುಳಿತಿದ್ದ ವ್ಯಕ್ತಿ ಆಕೆಯ ಕೈ ಮುಟ್ಟಿ, ಮುತ್ತು ನೀಡಲು ಮುಂದಾಗಿದ್ದಾನೆ ಎನ್ನಲಾಗಿದೆ. ಇದರಿಂದ ಆಕ್ರೋಶಗೊಂಡ ಮಹಿಳೆ ಬಸ್‌ನಲ್ಲೇ ಆತನನ್ನು ಥಳಿಸಿದ್ದು, ಬಳಿಕ ಇತರ ಪ್ರಯಾಣಿಕರೂ ಆತನಿಗೆ ಬುದ್ಧಿ ಹೇಳಿದ್ದಾರೆ. ಕೊನೆಗೆ ಬಂಗಾರಪೇಟೆ ತಲುಪುತ್ತಿದ್ದಂತೆ ವ್ಯಕ್ತಿ ಬಸ್‌ನಿಂದ ಇಳಿದು ಪರಾರಿಯಾಗಿದ್ದಾನೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಮಹಿಳೆಯ ಧೈರ್ಯಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.

Share News

About BigTv News

Check Also

ಮಾರಕಾಸ್ತ್ರ ಹಿಡಿದು ರೀಲ್ಸ್ ಮಾಡಿದ ಸಲ್ಮಾನ್ ಖಾನ್ ಸಿಸಿಬಿ ಬಲೆಗೆ!

ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಮಾರಕಾಸ್ತ್ರ ಹಿಡಿದು ರೀಲ್ಸ್ ಮಾಡಿದ್ದ ಆರೋಪದ ಮೇಲೆ ಸಲ್ಮಾನ್ ಖಾನ್ ಎಂಬಾತನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. …

Leave a Reply

Your email address will not be published. Required fields are marked *