ಬೆಂಗಳೂರು: ಸ್ಯಾಂಡಲ್ವುಡ್ ನಟಿಯ ಸಹೋದರಿ ಮೇಲೆ ಅತ್ಯಾಚಾರ ಎಸಗಿದ ಆರೋಪದಡಿ ಜಿಮ್ ತರಬೇತುದಾರ ರಾಘವೇಂದ್ರ (35)ನನ್ನು ಚಂದ್ರಾಲೇಔಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಒಂದೇ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ ರಾಘವೇಂದ್ರ ಹಾಗೂ ಯುವತಿ ಪ್ರೀತಿಸುತ್ತಿದ್ದರು. ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿದ್ದಾಗಿ ಯುವತಿ ಆರೋಪಿಸಿದ್ದಾರೆ. ಬಳಿಕ ರಾಘವೇಂದ್ರಗೆ ಮದುವೆಯಾಗಿ ಮಗು ಇರುವ ವಿಚಾರ ತಿಳಿದು ಅಂತರ ಕಾಯ್ದುಕೊಳ್ಳಲು ಮುಂದಾದಾಗ, ಖಾಸಗಿ ಫೋಟೊಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕುವುದಾಗಿ ಬೆದರಿಕೆ ಹಾಕಿದ್ದಾಗಿ ದೂರಿನಲ್ಲಿ ತಿಳಿಸಿದ್ದಾರೆ. ಇದೇ ವೇಳೆ ರಾಘವೇಂದ್ರ ಕೂಡ ಯುವತಿ ವಿರುದ್ಧ ಬ್ಲ್ಯಾಕ್ಮೇಲ್ ಆರೋಪ ಮಾಡಿ ತಲಘಟ್ಟಪುರ ಠಾಣೆಗೆ ಪ್ರತಿದೂರು ನೀಡಿದ್ದಾರೆ. ನಾಲ್ಕು ವರ್ಷ ಪ್ರೀತಿಸುತ್ತಿದ್ದ ಯುವತಿ ಬೇರೊಬ್ಬರೊಂದಿಗೆ ಸಂಪರ್ಕದಲ್ಲಿದ್ದ ಕಾರಣ ತಾನೇ ಅಂತರ ಕಾಯ್ದುಕೊಂಡಿದ್ದೆ ಎಂದು ಅವರು ಆರೋಪಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

