Breaking News

ಅಧ್ಯಕ್ಷ ಮಾಡಿದ ಹಣ ದುರುಪಯೋಗಕ್ಕೆ ಉಪಾಧ್ಯಕ್ಷ ಆತ್ಮಹತ್ಯೆ

ಶಿಗ್ಗಾಂವ: ಇಲ್ಲಿಯ ಸರ್ ಎಂ. ವಿಶ್ವೇಶ್ವರಯ್ಯ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಹಾಗೂ ಮ್ಯಾನೇಜರ್ ಹಣ ದುರುಪಯೋಗ ಪಡಿಸಿಕೊಂಡಿದ್ದರಿಂದ ಬೇಸತ್ತು ಉಪಾಧ್ಯಕ್ಷ ಆತ್ಮಹತ್ಯೆ ಮಾಡಿಕೊಂಡ ಘಟನೆ ಕುರಿತು ಇಲ್ಲಿಯ ಶಿಗ್ಗಾಂವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಚನ್ನಬಸಪ್ಪ ಬಸಪ್ಪ ಅಡರಕಟ್ಟಿ (67) ಮೃತ ಉಪಾಧ್ಯಕ್ಷ. ಇವರು ತಮ್ಮ ಸಂಘದ ಅಧ್ಯಕ್ಷ ಹಾಗೂ ಮ್ಯಾನೇಜರ್ ಹಣ ದುರುಪಯೋಗ ಪಡಿಸಿಕೊಂಡಿದ್ದರಿಂದ ಬೇಸತ್ತಿದ್ದರು. ಅಲ್ಲದೆ ಠೇವಣಿದಾರರು ಹಣ ವಾಪಸ್ ಕೊಡುವಂತೆ ಕೇಳುತ್ತಿದ್ದ ಕಾರಣ ಬೇಸತ್ತು ಮನೆಯಲ್ಲಿಯೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Share News

About BigTv News

Check Also

ಅಪ್ರಾಪ್ತ ವಯಸ್ಕ ಬಾಲಕಿ ಮೇಲಿನ ದೌರ್ಜನ್ಯ ಕೇಸ್: ಗ್ರಾಮದಲ್ಲಿ ಉದ್ವಿಗ್ನ ವಾತಾವರಣ, ಆರೋಪಿ ಮನೆ ಮೇಲೆ ದಾಳಿ

ಮುಂಡಗೋಡ: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಗರ್ಭಿಣಿಯಾಗಿಸಿದ ಆರೋಪದ ಮೇಲೆ 65 ವರ್ಷದ ವೃದ್ಧನನ್ನು ಪೊಲೀಸರು ಬಂಧಿಸಿದ್ದಾರೆ. …

Leave a Reply

Your email address will not be published. Required fields are marked *