ದೊಡ್ಡಬಳ್ಳಾಪುರ: ಸರ್ಕಾರಿ ಖಾಲಿ ಜಾಗದ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಭೀಕರ ಗಲಾಟೆ ನಡೆದಿದ್ದು, ಮಹಿಳೆಯರ ಮೇಲೆ ಮಚ್ಚು ಹಾಗೂ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿರುವ ಘಟನೆ ಮಾಕಳಿದುರ್ಗದಲ್ಲಿ ನಡೆದಿದೆ. ಮುನಿಲಕ್ಷ್ಮಮ್ಮ ಅವರ ಮನೆಯ ಪಕ್ಕದ ಸರ್ಕಾರಿ ಜಾಗ ತಮ್ಮದೆಂದು ಕುಮಾರ್ ಮತ್ತು ಸುರೇಶ್ ವಾದಿಸಿದ್ದು, ಈ ವಿಚಾರದಲ್ಲಿ ಮಾತಿಗೆ ಮಾತು ಬೆಳೆದು ಗಲಾಟೆಯಾಗಿದೆ. ಮನೆಯಲ್ಲಿದ್ದ ಮಹಿಳೆಯರಾದ ಮುನಿರತ್ನಮ್ಮ ಹಾಗೂ ವರಲಕ್ಷ್ಮಿ ಮೇಲೆ ಆರೋಪಿಗಳು ಮಚ್ಚಿನಿಂದ ಹಲ್ಲೆ ನಡೆಸಿದ್ದಾರೆ ಎಂದು ದೂರಲಾಗಿದೆ. ಘಟನೆಯ ದೃಶ್ಯಗಳು ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆಯಲ್ಲಿ ದೂರು ಹಾಗೂ ಪ್ರತಿದೂರು ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

