Breaking News

ಬಸ್‌ನಲ್ಲಿ ಮಹಿಳೆ ಜತೆ ಅಸಭ್ಯ ವರ್ತನೆ ತೋರಿದ ವ್ಯಕ್ತಿಗೆ ಥಳಿತ

ಕೋಲಾರದಿಂದ ಬಂಗಾರಪೇಟೆಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಡಬಲ್ ಸೀಟ್‌ನಲ್ಲಿ ಕುಳಿತಿದ್ದ ಮಹಿಳೆ ಜತೆ ಪಕ್ಕದಲ್ಲಿ ಕುಳಿತಿದ್ದ ವ್ಯಕ್ತಿ ಅಸಭ್ಯವಾಗಿ ವರ್ತಿಸಿದ್ದು, ಮಹಿಳೆ ಹಾಗೂ ಸಹ ಪ್ರಯಾಣಿಕರು ಧರ್ಮದೇಟು ನೀಡಿದ ಘಟನೆ ನಡೆದಿದೆ. ಮಹಿಳೆಯ ಕೈ ಮುಟ್ಟಿ, ಬಳಿಕ ಕೈಗೆ ಮುತ್ತು ನೀಡಿದ್ದಾನೆ. ಇದರಿಂದ ಆಕ್ರೋಶಗೊಂಡ ಮಹಿಳೆ ಥಳಿಸಿದ್ದಾರೆ. ಕೂಡಲೇ ಆಕೆಯ ನೆರವಿಗೆ ಬಂದ ಸಹ ಪ್ರಯಾಣಿಕರೂ ಸಹ ಗೂಸಾ ನೀಡಿದ್ದಾರೆ. ಥಳಿತಕ್ಕೊಳಗಾದ ವ್ಯಕ್ತಿ ಮಹಿಳೆಯ ಕಾಲು ಮುಟ್ಟಿ ಕ್ಷಮೆಯಾಚಿಸಿ ಬಸ್‌ನಿಂದ ಇಳಿದು ಪರಾರಿಯಾಗಿದ್ದಾನೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

Share News

About BigTv News

Check Also

ಅಪ್ರಾಪ್ತ ವಯಸ್ಕ ಬಾಲಕಿ ಮೇಲಿನ ದೌರ್ಜನ್ಯ ಕೇಸ್: ಗ್ರಾಮದಲ್ಲಿ ಉದ್ವಿಗ್ನ ವಾತಾವರಣ, ಆರೋಪಿ ಮನೆ ಮೇಲೆ ದಾಳಿ

ಮುಂಡಗೋಡ: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಗರ್ಭಿಣಿಯಾಗಿಸಿದ ಆರೋಪದ ಮೇಲೆ 65 ವರ್ಷದ ವೃದ್ಧನನ್ನು ಪೊಲೀಸರು ಬಂಧಿಸಿದ್ದಾರೆ. …

Leave a Reply

Your email address will not be published. Required fields are marked *