Breaking News

ಕೊಡಗಿನಲ್ಲಿ ಭೀಕರ ಕೊಲೆ : ಅನೈತಿಕ ಸಂಬಂಧಕ್ಕೆ ಒಪ್ಪದಿದ್ದಕ್ಕೆ ನಾದಿನಿಯ ಮಗನ ಬರ್ಬರ ಹತ್ಯೆ!

ಕೊಡಗು : ಅನೈತಿಕ ಸಂಬಂಧಕ್ಕೆ ಒಪ್ಪದಿದ್ದಕ್ಕೆ ನಾದಿನಿಯ ಮಗನನ್ನು ಭೀಕರವಾಗಿ ಕೊಲೆ ಮಾಡಲಾಗಿದೆ. ಬಾಲಕನ ತಾಯಿ ಸುಚಿತ್ರ ಮೇಲು ಮಾರಣಾಂತಿಕವಾಗಿ ಹಲ್ಲೆ ನಡೆದಿದೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಚಿಕ್ಕಪೇಟೆಯಲ್ಲಿ ಈ ಒಂದು ಭೀಕರ ಕೊಲೆ ನಡೆದಿದೆ. ಪ್ರತಾಪ್ (36) ಎಂಬಾತ 4 ವರ್ಷದ ಬಾಲಕ ಚರಣ್ ನನ್ನು ಕೊಲೆ ಮಾಡಿದ್ದಾನೆ. ಪತ್ನಿಯ ತಂಗಿ ಸುಚಿತ್ರ ಜೊತೆ ಅನೈತಿಕ ಸಂಬಂಧಕ್ಕೆ ಯತ್ನಿಸಿದ್ದಾನೆ. ಅದಕ್ಕೆ ಒಪ್ಪದಿದ್ದಾಗ ಸುಚಿತ್ರಾಳ ಪುತ್ರ ಚರಣ್ ನನ್ನು ಪ್ರತಾಪ್ ಕೊಲೆ ಮಾಡಿದ್ದಾನೆ. ಬಳಿಕ ಸುಚಿತ್ರಾಳ ಮೇಲು ಪ್ರತಾಪ್ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾನೆ. ಸದ್ಯ ಸುಚಿತ್ರಳನ್ನ ವಿರಾಜಪೇಟೆ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿಕ್ಕಪೇಟೆ ಗ್ರಾಮಾಂತರ ಠಾಣೆಯಲ್ಲಿ ಘಟನೆ ಕುರಿತು ಪ್ರಕರಣ ದಾಖಲಾಗಿದೆ.

Share News

About BigTv News

Check Also

ಮದುವೆಯಾಗಿ ಮಕ್ಕಳಿದ್ರೂ ಅಕ್ರಮ ಸಂಬಂಧ: ರೈಲಿಗೆ ತಲೆಕೊಟ್ಟು ವಿವಾಹಿತೆಯೊಂದಿಗೆ ಯುವಕ ಆತ್ಮಹತ್ಯೆ

ಮಂಡ್ಯದ ವಿಸಿ ಫಾರಂ ರಸ್ತೆಯ ರೈಲ್ವೆ ಹಳಿಯಲ್ಲಿ ರೈಲಿಗೆ ತಲೆಕೊಟ್ಟು ವಿವಾಹಿತೆ ಸಹನಾ (25) ಮತ್ತು ರಾಹುಲ್ (23) ಆತ್ಮಹತ್ಯೆಗೆ …

Leave a Reply

Your email address will not be published. Required fields are marked *