Breaking News

ಬಂಟ್ವಾಳ ಪೊಲೀಸರಿಂದ ನಿಷೇಧಿತ ಎಂ.ಡಿ.ಎಂ.ಎ ಸೇರಿದಂತೆ 4 ಲಕ್ಷ 90 ಸಾವಿರ ಮೌಲ್ಯದ ಸ್ವತ್ತುಗಳು ವಶಕ್ಕೆ!

ಬಂಟ್ವಾಳ ಗ್ರಾಮಾಂತರ ಪೊಲೀಸರ ಕಾರ್ಯಾಚರಣೆಯಲ್ಲಿ ನಿಷೇಧಿತ ಎಂಡಿಎಂಎ ಹಾಗೂ ಗಾಂಜಾ ಸೇರಿದಂತೆ ₹4.90 ಲಕ್ಷ ಮೌಲ್ಯದ ಸ್ವತ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಆಗಸ್ಟ್ 12ರಂದು ಬಂಟ್ವಾಳ ಕಾವಳಪಡೂರು ಗ್ರಾಮದಲ್ಲಿ ದಾಳಿ ನಡೆಸಿದ ಪೊಲೀಸರು, ₹2.25 ಲಕ್ಷ ಮೌಲ್ಯದ 22.57 ಗ್ರಾಂ ಎಂಡಿಎಂಎ, 30.34 ಗ್ರಾಂ ಗಾಂಜಾ, ಡ್ರಗ್ಸ್ ಸಾಗಾಟಕ್ಕೆ ಬಳಸಿದ್ದ ಕಾರು ಹಾಗೂ 5 ಮೊಬೈಲ್‌ಗಳನ್ನು ಜಪ್ತಿ ಮಾಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ನಾಶೀರ್ ಹುಸೇನ್ (37), ಮಹಮ್ಮದ್ ಜುನೈದ್ (38) ಹಾಗೂ ಮೊಹಮ್ಮದ್ ಅಫ್ರೀದಿ (24) ಎಂಬ ಮೂವರನ್ನು ವಶಕ್ಕೆ ಪಡೆಯಲಾಗಿದೆ. ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಲಾಗಿದೆ. ಕಾರ್ಯಾಚರಣೆಯನ್ನು ಎಎಸ್‌ಪಿ ಯಶ್ ಕುಮಾರ್ ಶರ್ಮಾ ನೇತೃತ್ವದಲ್ಲಿ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ನಡೆಸಿದ್ದು, ಜಿಲ್ಲಾ ತಾಂತ್ರಿಕ ವಿಭಾಗದ ಸಿಬ್ಬಂದಿಯೂ ಸಹಕರಿಸಿದ್ದಾರೆ.

Share News

About BigTv News

Check Also

ಅಡಿಕೆ ತೋಟಕ್ಕೆ ನೀರು ಹಾಯಿಸುವ ವಿಚಾರಕ್ಕೆ ಜಗಳ; ಚಿಕ್ಕಪ್ಪನಿಗೆ ಚಾಕು ಇರಿತ!

ಶಿವಮೊಗ್ಗ ತಾಲೂಕಿನ ಪುರದಾಳು ಗ್ರಾಮದಲ್ಲಿ ಜಮೀನಿನ ಗಡಿ ಹಾಗೂ ಅಡಿಕೆ ತೋಟಕ್ಕೆ ನೀರು ಹಾಯಿಸುವ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ಯುವಕನೊಬ್ಬ …

Leave a Reply

Your email address will not be published. Required fields are marked *