ಮಡಿಕೇರಿ: ನಾದಿನಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆ ವಿರೋಧಿಸಿದಾಗ ಸಿಟ್ಟಿನಿಂದ ನಾಲ್ಕು ವರ್ಷದ ಮಗುವನ್ನು ಹತ್ಯೆ ಮಾಡಿರುವ ಆರೋಪ ಕೊಡಗು ಜಿಲ್ಲೆಯ ವಿರಾಜಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಘಟನೆ ಸಂಬಂಧ ಪ್ರತಾಪ್ (35) ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೆಲವು ತಿಂಗಳಿಂದ ಪ್ರತಾಪ್ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದ. ಬುಧವಾರ ಮತ್ತೆ ಕೃತ್ಯಕ್ಕೆ ಮುಂದಾದಾಗ ವಿರೋಧಿಸಿದ್ದಕ್ಕೆ ಕೋಪಗೊಂಡು ಮಗುವಿನ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ್ದಾನೆ ಎಂದು ಸಂತ್ರಸ್ತೆ ಪೊಲೀಸರಿಗೆ ದೂರು ನೀಡಿದ್ದಾರೆ. ಬಳಿಕ ಸಂತ್ರಸ್ತೆಯ ಮೇಲೂ ಹಲ್ಲೆ ನಡೆಸಿದ್ದು, ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ವಿರಾಜಪೇಟೆ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

