Breaking News

ಒಂದೇ ರಾತ್ರಿ ಎಲ್ಲವೂ ಮುಗಿಯಿತು! 3 ವರ್ಷದ ದಾಂಪತ್ಯಕ್ಕೆ ದುರಂತ ಅಂತ್ಯ. ಶ್ರೀಲಂಕಾ ಟ್ರಿಪ್ ಕನಸು ಅಪೂರ್ಣ!

ಬೆಂಗಳೂರು: ರಾಜಗೋಪಾಲನಗರ ಠಾಣಾ ವ್ಯಾಪ್ತಿಯ ಹೆಗ್ಗನಹಳ್ಳಿಯಲ್ಲಿ ಕೌಟುಂಬಿಕ ಕಲಹ ದುರಂತ ಅಂತ್ಯ ಕಂಡಿದೆ. ಜಗಳದ ವೇಳೆ ಪತಿ ಪತ್ನಿಯ ಕಪಾಳಕ್ಕೆ ಹೊಡೆದಿದ್ದು, ಆಕೆ ಪ್ರಜ್ಞೆ ತಪ್ಪಿ ಬಿದ್ದ ಬಳಿಕ ಆತಂಕಗೊಂಡ ಪತಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ದಂಪತಿ ಪದ್ಮಾವತಿ (29) ಹಾಗೂ ಸುಮಂತ್ (32) ಮೃತರು. ಬುಧವಾರ ರಾತ್ರಿ ಕೌಟುಂಬಿಕ ವಿಚಾರವಾಗಿ ಜಗಳ ನಡೆದಿದ್ದು, ಗಲಾಟೆ ವಿಕೋಪಕ್ಕೆ ತಿರುಗಿತ್ತು. ಘಟನೆಗೂ ಮುನ್ನ ಪದ್ಮಾವತಿ ತಾಯಿಗೆ ಸಂದೇಶ ಕಳುಹಿಸಿದ್ದರೆಂದು ತಿಳಿದುಬಂದಿದೆ. ಈ ತಿಂಗಳ ಕೊನೆಯಲ್ಲಿ ದಂಪತಿ ಶ್ರೀಲಂಕಾ ಪ್ರವಾಸಕ್ಕೆ ತೆರಳಲು ಯೋಜಿಸಿದ್ದರು ಎನ್ನಲಾಗಿದೆ. ಘಟನೆ ಸಂಬಂಧ ರಾಜಗೋಪಾಲನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೌಟುಂಬಿಕ ಕಲಹ ಹಾಗೂ ಅಸಹಜ ಸಾವು ಸೇರಿದಂತೆ ವಿವಿಧ ಆಯಾಮಗಳಲ್ಲಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Share News

About BigTv News

Check Also

ಬೆಂಗಳೂರಲ್ಲಿ ನಕಲಿ ಡೇಟಿಂಗ್ ಬಲೆ, 20 ಲಕ್ಷ ರೂ. ಮೌಲ್ಯದ ಚಿನ್ನ ಲೂಟಿ

ಬೆಂಗಳೂರು: ಚಂದ್ರಾ ಲೇಔಟ್‌ನಲ್ಲಿ ಡೇಟಿಂಗ್ ಆಯಪ್ ಮೂಲಕ ಪರಿಚಯವಾದ ವ್ಯಕ್ತಿಯನ್ನು ಮನೆಗೆ ಕರೆಸಿಕೊಂಡ ಯುವಕನಿಗೆ ಚಾಕು ತೋರಿಸಿ ಬೆದರಿಸಿ, 226 …

Leave a Reply

Your email address will not be published. Required fields are marked *