Breaking News

ಬಹುಕೋಟಿ ಪೋನ್ಜಿ ಹಗರಣ: ಬೆಳಗಾವಿಯ ಶಿವಂ ಅಸೋಸಿಯೇಟ್ಸ್ ಮುಖ್ಯಸ್ಥ ಶಿವಾನಂದ ಸಿದ್ದಪ್ಪನೀಲಣ್ಣವರ್‌ ಸೆರೆ

ಬೆಂಗಳೂರು, ಆ.14: ಸುಮಾರು ₹2,110 ಕೋಟಿ ಪೋನ್ಜಿ ಹಗರಣಕ್ಕೆ ಸಂಬಂಧಿಸಿದಂತೆ ಬೆಳಗಾವಿಯ ಶಿವಂ ಅಸೋಸಿಯೇಟ್ಸ್ ಸಂಸ್ಥೆಯ ಮುಖ್ಯಸ್ಥ ಶಿವಾನಂದ ಸಿದ್ದಪ್ಪನೀಲಣ್ಣವರ್‌ನನ್ನು ಈಡಿ ಅಧಿಕಾರಿಗಳು ಬಂಧಿಸಿದ್ದಾರೆ. ಆ.13ರಂದು ಬೆಳಗಾವಿಯಲ್ಲಿ ಬಂಧಿಸಿ, ಮಂಗಳೂರಿನ ಪಿಎಂಎಲ್‌ಎ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಆ.24ರವರೆಗೆ ಈಡಿ ವಶಕ್ಕೆ ಒಪ್ಪಿಸಲಾಗಿದೆ. ಶಿವಂ ಅಸೋಸಿಯೇಟ್ಸ್ ಹಲವು ರಾಜ್ಯಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಏಜೆಂಟರ ಮೂಲಕ ಸಾರ್ವಜನಿಕರಿಂದ ₹2,110.97 ಕೋಟಿ ಸಂಗ್ರಹಿಸಿತ್ತು ಎನ್ನಲಾಗಿದೆ. ಹೂಡಿಕೆಗೆ ಪ್ರತಿ ತಿಂಗಳು ಶೇ.3ರಷ್ಟು ಲಾಭ ನೀಡುವುದಾಗಿ ಭರವಸೆ ನೀಡಿ, ಹೊಸ ಹೂಡಿಕೆದಾರರಿಂದ ಪಡೆದ ಹಣವನ್ನು ಹಿಂದಿನ ಹೂಡಿಕೆದಾರರಿಗೆ ಬಡ್ಡಿ ಪಾವತಿಸಲು ಬಳಸಲಾಗುತ್ತಿತ್ತು ಎಂದು ತನಿಖೆಯಲ್ಲಿ ಪತ್ತೆಯಾಗಿದೆ. ಸಾರ್ವಜನಿಕರಿಂದ ಸಂಗ್ರಹಿಸಿದ ಹಣವನ್ನು ವೈಯಕ್ತಿಕ ಹಾಗೂ ಕುಟುಂಬ ಸದಸ್ಯರ ಖಾತೆಗಳು ಮತ್ತು ವಿವಿಧ ಸಂಸ್ಥೆಗಳ ಮೂಲಕ ವರ್ಗಾಯಿಸಿ, ಐಷಾರಾಮಿ ವಾಹನಗಳು, ದುಬಾರಿ ಬಂಗಲೆಗಳು ಹಾಗೂ ಬೇನಾಮಿ ಆಸ್ತಿಗಳ ಖರೀದಿಗೆ ಬಳಸಿರುವುದು ಬೆಳಕಿಗೆ ಬಂದಿದೆ. ಪ್ರಕರಣದ ಕುರಿತು ಈಡಿ ಹೆಚ್ಚಿನ ತನಿಖೆ ಮುಂದುವರಿಸಿದೆ.

Share News

About BigTv News

Check Also

ಇ-ಖಾತೆಗಾಗಿ ₹50 ಸಾವಿರ ಲಂಚಕ್ಕೆ ಬೇಡಿಕೆ; ಮೊದಲ ಕಂತು ಪಡೆಯುವಾಗ ನಗರಸಭೆ ಸಿಬ್ಬಂದಿ ಲೋಕಾಯುಕ್ತ ಬಲೆಗೆ

ಶಿಡ್ಲಘಟ್ಟ: ಇ-ಖಾತೆ ಮಾಡಿಕೊಡಲು ₹50 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟು, ಮೊದಲ ಕಂತಿನ ₹25,500 ಸ್ವೀಕರಿಸುತ್ತಿದ್ದ ನಗರಸಭೆಯ ಎಸ್‌ಡಿಎ ನಾಗರಾಜ್ …

Leave a Reply

Your email address will not be published. Required fields are marked *