Breaking News

ಬೆಂಗಳೂರಲ್ಲಿ ಬೆಚ್ಚಿ ಬೀಳಿಸೋ ಘಟನೆ ; ಪತ್ನಿಯನ್ನು ಹತ್ಯೆಗೈದು ಪತಿಯೂ ಆತ್ಮಹತ್ಯೆಗೆ ಶರಣು

ಬೆಂಗಳೂರು: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತ್ನಿಯನ್ನು ಹತ್ಯೆಗೈದ ಬಳಿಕ ಪತಿಯೂ ಆತ್ಮಹತ್ಯೆಗೆ ಶರಣಾದ ದಾರುಣ ಘಟನೆ ಲಗ್ಗೆರೆ ರಾಜೇಶ್ವರಿ ನಗರದಲ್ಲಿ ನಡೆದಿದೆ. ಪದ್ಮಾವತಿ (29) ಹಾಗೂ ಆಕೆಯ ಪತಿ ಸುಮಂತ್ (22) ಮೃತರು. ಮನೆ ಹಾಗೂ ಕೌಟುಂಬಿಕ ವಿಚಾರಕ್ಕೆ ದಂಪತಿ ನಡುವೆ ಆಗಾಗ್ಗೆ ಜಗಳ ನಡೆಯುತ್ತಿತ್ತು ಎನ್ನಲಾಗಿದೆ. ಕಳೆದ ಮಧ್ಯರಾತ್ರಿ ಪತ್ನಿಯನ್ನು ಹತ್ಯೆಗೈದ ಬಳಿಕ ಸುಮಂತ್ ಆತ್ಮಹತ್ಯೆ ಮಾಡಿಕೊಂಡಿದ್ದು, ಮುನ್ನ ತಾಯಿಗೆ ‘ನಾನು ಸಾಯುತ್ತಿದ್ದೇನೆ’ ಎಂದು ವಾಯ್ಸ್ ಮೆಸೇಜ್ ಕಳುಹಿಸಿದ್ದ ಎನ್ನಲಾಗಿದೆ. ಬೆಳಗ್ಗೆ ಸಂಬಂಧಿಕರು ಮನೆಗೆ ಬಂದಾಗ ದಂಪತಿ ಮೃತಪಟ್ಟಿರುವುದು ಬೆಳಕಿಗೆ ಬಂದಿದೆ. ಘಟನೆ ಕುರಿತು ರಾಜಗೋಪಾಲನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *