ಬಾಗಲಕೋಟೆ: ಜಮಖಂಡಿ ತಾಲೂಕಿನ ಹಿಪ್ಪರಗಿ ಗ್ರಾಮದಲ್ಲಿ ಜುಲೈ 25ರಂದು ಬಾರ್ ಮುಂದೆ ಕಾರು ಸ್ಫೋಟಗೊಂಡ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಕಾರು ಸ್ಫೋಟದ ಹಿಂದೆ ಹನಮಂತ ಅಥಣಿ ಎಂಬುವವರ ಹತ್ಯೆಯ ಸಂಚು ಇರುವುದು ಪೊಲೀಸರ ತನಿಖೆಯಿಂದ ಬಯಲಾಗಿದೆ. ಭೂಮಿ ಹಾಗೂ ಹಣಕಾಸಿನ ವಿವಾದದ ಹಿನ್ನೆಲೆಯಲ್ಲಿ ಹನಮಂತನನ್ನು ಕೊಲೆ ಮಾಡಲು ಆರೋಪಿಗಳು ಕಾರಿನ ಬಳಿ 30 ಜಿಲೆಟಿನ್ ಕಡ್ಡಿಗಳನ್ನು ಇಟ್ಟು ಸ್ಫೋಟಿಸಿದ್ದರು ಎನ್ನಲಾಗಿದೆ. ಆದರೆ ಹನಮಂತ ಕಾರು ಹತ್ತುವ ಮುನ್ನವೇ ಸ್ಫೋಟ ಸಂಭವಿಸಿದ್ದರಿಂದ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಾನಂದ ಜಲ್ಲಿ, ರೇವಣಪ್ಪ ಜಲ್ಲಿ, ಮಾದೇವ ಸಂಗಾಪುರ ಹಾಗೂ ಮಲ್ಲಿಕಾರ್ಜುನ ಭದ್ರಾಪನವರ ಬಂಧನವಾಗಿದ್ದು, ಗಜಾನನ ಸಂಗಾಪುರ ತಲೆಮರೆಸಿಕೊಂಡಿದ್ದಾನೆ. ಪೊಲೀಸರು ವೈಜ್ಞಾನಿಕ ಹಾಗೂ ತಾಂತ್ರಿಕ ತನಿಖೆ ಮುಂದುವರಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

