Breaking News

ಅನೈತಿಕ ಸಂಬಂಧ ಶಂಕೆ: ಗಂಡನಿಂದಲೇ ಹೆಂಡತಿಯ ಮೇಲೆ ಹಲ್ಲೆ

ಹೊಸದುರ್ಗ: ಅನೈತಿಕ ಸಂಬಂಧದ ಶಂಕೆಯಲ್ಲಿ ಪತಿಯೊಬ್ಬ ತನ್ನ ಪತ್ನಿಗೆ ಚಾಕುವಿನಿಂದ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ತಾಲೂಕಿನ ಶ್ರೀರಾಂಪುರದಲ್ಲಿ ಗುರುವಾರ ರಾತ್ರಿ ನಡೆದಿದೆ. ಗಾಯಗೊಂಡ ಮಹಿಳೆಯನ್ನು ಹಿರಿಯೂರು ತಾಲೂಕಿನ ಕುಂಟಪ್ಪನಹಳ್ಳಿಯ ನೇತ್ರಾವತಿ (30) ಎಂದು ಗುರುತಿಸಲಾಗಿದ್ದು, ಆಕೆಯ ಪತಿ ತಿಪ್ಪೇಸ್ವಾಮಿ ಆರೋಪಿಯಾಗಿದ್ದಾನೆ. ನೇತ್ರಾವತಿ, ಪತಿ ಹಾಗೂ ಇಬ್ಬರು ಮಕ್ಕಳೊಂದಿಗೆ ಕೂಲಿ ಕೆಲಸಕ್ಕಾಗಿ ಶ್ರೀರಾಂಪುರಕ್ಕೆ ಬಂದು ಕಳೆದ 20 ದಿನಗಳಿಂದ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಗುರುವಾರ ರಾತ್ರಿ ಮನೆಗೆ ಬಂದ ತಿಪ್ಪೇಸ್ವಾಮಿ, ತಮ್ಮೊಂದಿಗೆ ಕೆಲಸ ಮಾಡುತ್ತಿದ್ದ ಕಂಚೀಪುರ ಗ್ರಾಮದ ವಿಜಯಕುಮಾರ್ ಮನೆಯಲ್ಲಿ ಇರುವುದನ್ನು ಕಂಡು ಪತ್ನಿಯೊಂದಿಗೆ ಜಗಳವಾಡಿದ್ದಾನೆ. ಗಲಾಟೆಯಿಂದ ಬೇಸತ್ತ ನೇತ್ರಾವತಿ ಪೊಲೀಸ್ ಠಾಣೆಗೆ ದೂರು ನೀಡಲು ಹೊರಟಾಗ, ಆಕೆಯನ್ನು ಹಿಂಬಾಲಿಸಿದ ತಿಪ್ಪೇಸ್ವಾಮಿ ಶ್ರೀರಾಂಪುರದ ಅಂಬೇಡ್ಕರ್ ವೃತ್ತದ ಬಳಿ ಚಾಕುವಿನಿಂದ ಮುಖ ಹಾಗೂ ಕೈ-ಮೈಗೆ ಹಲ್ಲೆ ನಡೆಸಿದ್ದಾನೆ. ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಿ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

Share News

About BigTv News

Check Also

ದೇರಳಕಟ್ಟೆ: ಮೆಡಿಕಲ್‌ ಕಾಲೇಜಿನಲ್ಲಿ Ragging ಪ್ರಕರಣ ದಾಖಲು

ಮಂಗಳೂರು: ದೇರಳಕಟ್ಟೆಯ ಮೆಡಿಕಲ್ ಕಾಲೇಜೊಂದರಲ್ಲಿ ಕಿರಿಯ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳು ರಾಗಿಂಗ್ ನಡೆಸಿ ಜೀವ ಬೆದರಿಕೆ ಹಾಕಿರುವ ಆರೋಪದಡಿ ಉಳ್ಳಾಲ …

Leave a Reply

Your email address will not be published. Required fields are marked *