ಕಲಘಟಗಿ: ಬೆಳೆ ವಿಮೆ ಯೋಜನೆಯನ್ನೇ ದುರ್ಬಳಕೆ ಮಾಡಿಕೊಂಡು ₹9.39 ಕೋಟಿ ವಂಚಿಸಿರುವ ಬೃಹತ್ ಹಗರಣ ತಬಕದಹೊನ್ನಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ. ಬೆಳೆಯೇ ಇಲ್ಲದ ಜಮೀನುಗಳಲ್ಲಿ ಬೆಳೆ ನಷ್ಟವಾಗಿದೆ ಎಂದು ಸುಳ್ಳು ಮಾಹಿತಿ ನೀಡಿ ಪರಿಹಾರ ಪಡೆಯಲಾಗಿದೆ ಎನ್ನಲಾಗಿದೆ. ಅಕ್ರಮಕ್ಕೆ ಸಂಬಂಧಿಸಿ ವಿಮಾ ಕಂಪನಿ ಹಾಗೂ ಸ್ಥಳೀಯರಾದ ಬಸಪ್ಪ ಕುರಟ್ಟಿ, ಪ್ರಕಾಶ ತಿಪ್ಪಣ್ಣವರ ಸೇರಿದಂತೆ 10 ಮಂದಿಯ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಕೃಷಿ ಇಲಾಖೆ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಪ್ರಕರಣದ ತನಿಖೆಯನ್ನು ಸೈಬರ್ ಕ್ರೈಂ ವಿಭಾಗಕ್ಕೆ ವಹಿಸಲಾಗಿದ್ದು, ಜಿಯೋ-ಟ್ಯಾಗ್ ಫೋಟೋ, ವಿಡಿಯೋ ಹಾಗೂ ವಿಮೆ ಹಣ ಬಿಡುಗಡೆಯಾದ ವಿವರಗಳನ್ನು ಪರಿಶೀಲಿಸಲಾಗುತ್ತಿದೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ತಿಳಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

