ಬೆಂಗಳೂರು: ಕೌಟುಂಬಿಕ ಕಲಹಕ್ಕೆ ಎಂಜಿನಿಯರ್ ದಂಪತಿ ನಡುವೆ ಜಗಳ ತಾರಕಕ್ಕೇರಿ ಪತ್ನಿಯನ್ನು ಕತ್ತು ಹಿಸುಕಿ ಕೊಲೆ ಮಾಡಿದ ಪತಿ ಬಳಿಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ರಾಜಗೋಪಾಲನಗರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪದ್ಮಾವತಿ (29) ಕೊಲೆಯಾದವರು, ಸುಮಂತ್ ಜೈನ್ (32) ಆತ್ಮಹತ್ಯೆ ಮಾಡಿಕೊಂಡವರು. ನಾಲ್ಕು ವರ್ಷಗಳ ಹಿಂದೆ ಪ್ರೀತಿಸಿ ವಿವಾಹವಾಗಿದ್ದ ದಂಪತಿ, ಲಗ್ಗೆರೆಯ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು. ಕೌಟುಂಬಿಕ ವಿಚಾರವಾಗಿ ಆಗಾಗ ಜಗಳ ನಡೆಯುತ್ತಿತ್ತು ಎನ್ನಲಾಗಿದೆ. ಶುಕ್ರವಾರ ಜಗಳ ವಿಕೋಪಕ್ಕೆ ತಿರುಗಿದಾಗ ಸುಮಂತ್ ಪತ್ನಿಯನ್ನು ಕೊಲೆ ಮಾಡಿ ಬಳಿಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಹತ್ಯೆಗೂ ಮುನ್ನ ಸುಮಂತ್ ತಾಯಿಗೆ ವಾಟ್ಸ್‌ಆಯಪ್ ವಾಯ್ಸ್ ಸಂದೇಶ ಕಳುಹಿಸಿ, ಮನೆ ವಿಚಾರವಾಗಿ ಜಗಳವಾಗುತ್ತಿದ್ದು ತಾನು ಸಾಯುತ್ತಿರುವುದಾಗಿ ತಿಳಿಸಿದ್ದ ಎನ್ನಲಾಗಿದೆ. ರಾಜಗೋಪಾಲನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸುತ್ತಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

