Breaking News

ಮಾನಸಿಕ ಅಸ್ವಸ್ಥೆ ಮೇಲೆ ಅತ್ಯಾಚಾರ: ಪೊಲೀಸ್​​ ತನಿಖೆಯಲ್ಲಿ ಸ್ಫೋಟಕ ಅಂಶ ಬಯಲು; 7 ಜನರ ಬಂಧನ

ಗದಗದಲ್ಲಿ ಮಾನಸಿಕ ಅಸ್ವಸ್ಥ ಯುವತಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ ಎಸಗಿ ಗರ್ಭಿಣಿಯಾದ ಬಳಿಕ ಅಕ್ರಮವಾಗಿ ಗರ್ಭಪಾತ ಮಾಡಿಸಿದ ಪ್ರಕರಣ ಬೆಳಕಿಗೆ ಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಅತ್ಯಾಚಾರ ಆರೋಪಿಗಳು, ಆರ್‌ಎಂಪಿ ವೈದ್ಯ ಹಾಗೂ ಸ್ಟಾಫ್ ನರ್ಸ್ ಸೇರಿದಂತೆ ಏಳು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಯುವತಿ ಮೂರು ತಿಂಗಳ ಗರ್ಭಿಣಿಯಾದ ವಿಷಯ ತಿಳಿದ ಬಳಿಕ ಆರೋಪಿಗಳು ಕುಟುಂಬಕ್ಕೆ ಹಣದ ಆಮಿಷವೊಡ್ಡಿ, ದೂರು ನೀಡದಂತೆ ಜೀವಬೆದರಿಕೆ ಹಾಕಿದ್ದಾರೆ. ಬಳಿಕ ವೈದ್ಯರು ಹಾಗೂ ನರ್ಸ್ ನೆರವಿನಿಂದ ಗರ್ಭಪಾತದ ಮಾತ್ರೆ ನೀಡಿ ಅಕ್ರಮವಾಗಿ ಗರ್ಭಪಾತ ಮಾಡಿಸಿರುವ ಆರೋಪ ಕೇಳಿಬಂದಿದೆ. ಗರ್ಭಪಾತಕ್ಕೆ ನೆರವಾದ ಆರೋಪದಡಿ ಇನ್ನೂ ಕೆಲವರ ವಿರುದ್ಧ ಎಫ್‌ಐಆರ್ ದಾಖಲಾಗಿದ್ದು, ವೈದ್ಯರ ಚೀಟಿ ಇಲ್ಲದೆ ಮಾತ್ರೆ ಮಾರಾಟ ಮಾಡಿದ ಮೆಡಿಕಲ್ ಶಾಪ್ ಮಾಲೀಕನ ಪತ್ತೆಗೂ ತನಿಖೆ ನಡೆಯುತ್ತಿದೆ. ಪ್ರಕರಣ ಮುಚ್ಚಿಹಾಕಲು ಯತ್ನಿಸಿದವರ ವಿರುದ್ಧವೂ ಕ್ರಮ ಕೈಗೊಳ್ಳುವುದಾಗಿ ಎಸ್‌ಪಿ ಎಚ್ಚರಿಕೆ ನೀಡಿದ್ದಾರೆ.

Share News

About BigTv News

Check Also

ದೇರಳಕಟ್ಟೆ: ಮೆಡಿಕಲ್‌ ಕಾಲೇಜಿನಲ್ಲಿ Ragging ಪ್ರಕರಣ ದಾಖಲು

ಮಂಗಳೂರು: ದೇರಳಕಟ್ಟೆಯ ಮೆಡಿಕಲ್ ಕಾಲೇಜೊಂದರಲ್ಲಿ ಕಿರಿಯ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳು ರಾಗಿಂಗ್ ನಡೆಸಿ ಜೀವ ಬೆದರಿಕೆ ಹಾಕಿರುವ ಆರೋಪದಡಿ ಉಳ್ಳಾಲ …

Leave a Reply

Your email address will not be published. Required fields are marked *