Breaking News

ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!

ಬೀದರ್‌ನಲ್ಲಿ 19 ತಿಂಗಳ ಹಿಂದೆ CMS ವಾಹನದ ಸಿಬ್ಬಂದಿ ಮೇಲೆ ಗುಂಡಿನ ದಾಳಿ ನಡೆಸಿ ಕೇವಲ 63 ಸೆಕೆಂಡ್‌ಗಳಲ್ಲಿ ₹83 ಲಕ್ಷ ದೋಚಿ ಪರಾರಿಯಾಗಿದ್ದ ಅಣ್ಣ-ತಮ್ಮಂದಿರ ಗ್ಯಾಂಗ್‌ನ್ನು ಕರ್ನಾಟಕ ಪೊಲೀಸರು ಕೊನೆಗೂ ಬಂಧಿಸಿದ್ದಾರೆ. ದರೋಡೆ ಬಳಿಕ ಆರೋಪಿಗಳು ಹೈದರಾಬಾದ್, ಮಹಾರಾಷ್ಟ್ರ, ಮಧ್ಯಪ್ರದೇಶ ಹಾಗೂ ಉತ್ತರ ಪ್ರದೇಶ ಮೂಲಕ ಬಿಹಾರಕ್ಕೆ ತೆರಳಿ ತಲೆಮರೆಸಿಕೊಂಡಿದ್ದರು. 19 ತಿಂಗಳ ಕಾಲ ಸಿಸಿಟಿವಿ, ಮೊಬೈಲ್ ಟವರ್ ಹಾಗೂ ತಾಂತ್ರಿಕ ಸಾಕ್ಷ್ಯಗಳ ಆಧಾರದಲ್ಲಿ ಪೊಲೀಸರು ಆರೋಪಿಗಳ ಸುಳಿವು ಪತ್ತೆಹಚ್ಚಿದ್ದಾರೆ. ಬಿಹಾರದ ಗ್ರಾಮವೊಂದರಲ್ಲಿ ಸ್ಥಳೀಯರ ವಿರೋಧದ ನಡುವೆಯೂ ವೇಷ ಬದಲಿಸಿಕೊಂಡು ಕಾರ್ಯಾಚರಣೆ ನಡೆಸಿದ ಕರ್ನಾಟಕದ ವಿಶೇಷ ತಂಡ, ಸೂಕ್ತ ಸಮಯದಲ್ಲಿ ದಾಳಿ ಮಾಡಿ ಮೋಸ್ಟ್ ವಾಂಟೆಡ್ ಸಹೋದರರನ್ನು ಬಂಧಿಸಿದೆ. ಬಳಿಕ ಆರೋಪಿಗಳನ್ನು ಕರ್ನಾಟಕಕ್ಕೆ ಕರೆತರಲಾಗಿದೆ.

Share News

About BigTv News

Check Also

ದೀಪಾವಳಿ ಹಬ್ಬದ ದಿನವೇ ಕುಟುಂಬಸ್ಥರು ಕಣ್ಣೀರು! ಅಡ್ಡಾದಿಡ್ಡಿ ಕಾರು ಚಲಾಯಿಸಿ ಬೈಕ್​ ಸವಾರನ ಪ್ರಾಣ ತೆಗೆದ ಮಹಿಳೆ ಪರಾರಿ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಮಹಿಳೆಯೊಬ್ಬರು ವೇಗವಾಗಿ ಚಲಾಯಿಸುತ್ತಿದ್ದ ಮಹೀಂದ್ರಾ ಥಾರ್ ಕಾರು ಸ್ಕೂಟರ್‌ಗೆ ಡಿಕ್ಕಿ ಹೊಡೆದ ಪರಿಣಾಮ 55 ವರ್ಷದ …

Leave a Reply

Your email address will not be published. Required fields are marked *