ಬೆಂಗಳೂರು, ಆಗಸ್ಟ್ 15: ಮನೆಯಿಂದಲೇ ಪ್ಯಾಕಿಂಗ್ ಕೆಲಸ ನೀಡಿ ಹಣ ಗಳಿಸುವ ಅವಕಾಶ ಹಾಗೂ ಹೂಡಿಕೆ ಮಾಡಿದ ಹಣವನ್ನು ದುಪ್ಪಟ್ಟು ಮಾಡುವುದಾಗಿ ನಂಬಿಸಿ ಸಾವಿರಾರು ಜನರಿಗೆ ₹50 ಕೋಟಿಗೂ ಅಧಿಕ ವಂಚಿಸಿದ ಆರೋಪದಡಿ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ‘ಶ್ರೀ ಕಾಳಿಕಾದೇವಿ ಎಂಟರ್‌ಪ್ರೈಸಸ್’ ಹೆಸರಿನಲ್ಲಿ ಊದುಬತ್ತಿ, ಮೆಣದಬತ್ತಿ, ಪೇಪರ್ ಪ್ಲೇಟ್ ಪ್ಯಾಕಿಂಗ್ ಕೆಲಸ ನೀಡುವುದಾಗಿ ಹೇಳಿ ಗ್ರಾಹಕರಿಂದ ಲಕ್ಷಾಂತರ ರೂ. ಠೇವಣಿ ಪಡೆಯಲಾಗುತ್ತಿತ್ತು. ಕೋಲಾರ, ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ 7–8 ಸಾವಿರ ಮಂದಿ ಹಣ ಕಳೆದುಕೊಂಡಿರುವ ಶಂಕೆ ವ್ಯಕ್ತವಾಗಿದೆ. ಕೋಲಾರ, ಬಂಗಾರಪೇಟೆ, ಚಿಕ್ಕಜಾಲ, ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರದಲ್ಲಿ ಪ್ರಕರಣಗಳು ದಾಖಲಾಗಿದ್ದು, ಸಂಸ್ಥೆಯ ಮಾಲೀಕ ದಂಪತಿ ಸೇರಿದಂತೆ ನಾಲ್ವರನ್ನು ಬಂಧಿಸಲಾಗಿದೆ. ಹಣ ಕಳೆದುಕೊಂಡವರು ತಮ್ಮ ಹಣ ವಾಪಸ್ ನೀಡುವಂತೆ ಪೊಲೀಸರನ್ನು ಆಗ್ರಹಿಸುತ್ತಿದ್ದು, ಪ್ರಕರಣದ ತನಿಖೆ ಮುಂದುವರಿದಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

