Breaking News

ಪೊಲೀಸ್ ಸೋಗಿನಲ್ಲಿ ಚಿನ್ನಾಭರಣ ಕಳ್ಳತನ – ಇಬ್ಬರು ಅಂತರರಾಜ್ಯ ಕಳ್ಳರ ಬಂಧನ

ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಪೊಲೀಸರ ಸೋಗಿನಲ್ಲಿ ಮಹಿಳೆಯರನ್ನು ವಂಚಿಸಿ ಚಿನ್ನಾಭರಣ ಕಳವು ಮಾಡುತ್ತಿದ್ದ ಆಂಧ್ರಪ್ರದೇಶ ಮೂಲದ ಸೈಯದ್ ಅಬ್ಬಾಸ್ ಅಲಿ ಹಾಗೂ ಹುಸೇನ್ ಭಾಷಾ ಎಂಬುವರನ್ನು ಪೇಪರ್ ಟೌನ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ ₹4.35 ಲಕ್ಷ ಮೌಲ್ಯದ 40 ಗ್ರಾಂ ಚಿನ್ನದ ಸರ ವಶಪಡಿಸಿಕೊಳ್ಳಲಾಗಿದೆ. ತಿಮ್ಲಾಪುರ ರಸ್ತೆಯಲ್ಲಿ ಒಂಟಿಯಾಗಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯನ್ನು ಬೈಕ್‌ನಲ್ಲಿ ಬಂದ ಆರೋಪಿಗಳು ತಡೆದು, ತಾವು ಪೊಲೀಸರು ಎಂದು ಪರಿಚಯಿಸಿಕೊಂಡಿದ್ದರು. ಸರಗಳ್ಳತನದ ಭೀತಿ ಮೂಡಿಸಿ ಮಹಿಳೆಯಿಂದ ಚಿನ್ನದ ಸರ ತೆಗೆಸಿಕೊಂಡು ಪರಾರಿಯಾಗಿದ್ದರು. ದೂರು ಆಧರಿಸಿ ತನಿಖೆ ನಡೆಸಿದ ಪೊಲೀಸರು ವಿಶೇಷ ತಂಡ ರಚಿಸಿ ಆರೋಪಿಗಳನ್ನು ಬಂಧಿಸಿದ್ದಾರೆ. ಎಸ್‌ಪಿ ನಿಖಿಲ್ ಬಿ. ಹಾಗೂ ಹೆಚ್ಚುವರಿ ಎಸ್‌ಪಿ ಕಾರಿಯಪ್ಪ ಎ.ಜಿ. ಮಾರ್ಗದರ್ಶನದಲ್ಲಿ, ಡಿವೈಎಸ್‌ಪಿ ಪ್ರಕಾಶ್ ರಾಠೋಡ್ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿತ್ತು.

Share News

About BigTv News

Check Also

ಬೆಂಗಳೂರಿನಲ್ಲಿ ಮತ್ತೊಂದು ನಕಲಿ ಔಷಧ ಜಾಲ ಪತ್ತೆ, 90ಕ್ಕೂ ಹೆಚ್ಚು ಆಸ್ಪತ್ರೆಗಳಿಗೆ ಪೂರೈಕೆಯಾಗಿತ್ತು ಫೇಕ್ ಮೆಡಿಸಿನ್

ಬೆಂಗಳೂರು: ಮಿನರ್ವ್ ಸರ್ಕಲ್‌ನ ಕೃಪಾ ಹೆಲ್ತ್‌ಕೇರ್‌ ಮೇಲೆ ಎಸ್‌ಐಟಿ ಹಾಗೂ ಔಷಧ ನಿಯಂತ್ರಣ ಇಲಾಖೆ ಜಂಟಿಯಾಗಿ ದಾಳಿ ನಡೆಸಿ ನಕಲಿ …

Leave a Reply

Your email address will not be published. Required fields are marked *