ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ತುಮರಿ ಸಮೀಪದ ಗೊರಗೋಡಿನಲ್ಲಿ ಜೈಲಿನಿಂದ ಬಿಡುಗಡೆಯಾಗಿ ಬಂದಿದ್ದ ತಂದೆಯನ್ನು ಮಗನೇ ಕೊಲೆ ಮಾಡಿರುವ ಆರೋಪ ಕೇಳಿಬಂದಿದೆ. ಮೃತರನ್ನು ಸುಬ್ರಾಯ (55) ಎಂದು ಗುರುತಿಸಲಾಗಿದ್ದು, ಆರೋಪಿ ಮಗ ಜಯಂತ್ನನ್ನು ಕಾರ್ಗಲ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ತಂದೆ-ಮಗನ ನಡುವೆ ಜಗಳ ನಡೆದ ವೇಳೆ ಜಯಂತ್ ಕತ್ತಿ ಹಾಗೂ ಕೋಲಿನಿಂದ ತಂದೆಯ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ್ದಾನೆ ಎನ್ನಲಾಗಿದೆ. ಬಳಿಕ ಮೃತದೇಹವನ್ನು ಚಿಕ್ಕಪ್ಪನ ಜಮೀನಿನಲ್ಲಿದ್ದ ಬಾವಿಗೆ ಎಸೆದಿದ್ದಾಗಿ ವಿಚಾರಣೆ ವೇಳೆ ಆರೋಪಿ ತಿಳಿಸಿದ್ದಾನೆ. ಸುಬ್ರಾಯ ಈ ಹಿಂದೆ ತನ್ನ ತಂದೆ ಹಾಗೂ ತಂಗಿಯನ್ನು ಕೊಲೆ ಮಾಡಿ ಜೈಲು ಶಿಕ್ಷೆ ಅನುಭವಿಸಿದ್ದ. ಇತ್ತೀಚೆಗೆ ಜೈಲಿನಿಂದ ಬಿಡುಗಡೆಯಾಗಿ ಮನೆಗೆ ಮರಳಿದ್ದ ಆತ ಪತ್ನಿ ಹಾಗೂ ಮಗನಿಗೆ ಬೆದರಿಕೆ ಹಾಕುತ್ತಿದ್ದ ಎನ್ನಲಾಗಿದೆ. ಈ ಬಗ್ಗೆ ದೂರು ನೀಡಿದ್ದರೂ ಕ್ರಮ ಕೈಗೊಳ್ಳುವ ಮುನ್ನವೇ ಘಟನೆ ನಡೆದಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

