Breaking News

ಮಹಿಳೆ ಜೊತೆ ಅಸಭ್ಯ ವರ್ತನೆ; ತಮ್ಮೇನಹಳ್ಳಿ ಸ್ವಾಮೀಜಿಗೆ ಜನರಿಂದ ಗೂಸಾ!

ಚಿತ್ರದುರ್ಗ: ಮಹಿಳೆಯೊಬ್ಬರೊಂದಿಗೆ ಅಸಭ್ಯವಾಗಿ ವರ್ತಿಸಿದ ಆರೋಪದ ಹಿನ್ನೆಲೆಯಲ್ಲಿ ಮೊಳಕಾಲ್ಮೂರು ತಾಲೂಕಿನ ತಮ್ಮೇನಹಳ್ಳಿ ಮಠದ ಜಮ್ಮಣ್ಣ ಸ್ವಾಮೀಜಿಗೆ ಮಹಿಳೆಯ ಸಂಬಂಧಿಕರು ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಬಳ್ಳಾರಿ ಮೂಲದ ಮಹಿಳೆಯ ಸಂಬಂಧಿಕರು ಸ್ವಾಮೀಜಿಯನ್ನು ಭೇಟಿಯಾಗಲು ತೆರಳಿದ್ದ ವೇಳೆ, ಮಹಿಳೆಯೊಂದಿಗೆ ಸ್ವಾಮೀಜಿ ಅನುಚಿತವಾಗಿ ವರ್ತಿಸಿದ್ದಾರೆ ಎನ್ನಲಾಗಿದೆ. ಈ ವಿಷಯ ತಿಳಿದ ಬಳಿಕ ಆಕೆಯ ಸಂಬಂಧಿಕರು ಸ್ವಾಮೀಜಿಯನ್ನು ಥಳಿಸಿದ್ದಾರೆ ಎಂದು ವರದಿಯಾಗಿದೆ. ಇನ್ನು ಜಮ್ಮಣ್ಣ ಸ್ವಾಮೀಜಿ ವಾಮಾಚಾರ ಹಾಗೂ ಅನಾರೋಗ್ಯ ನಿವಾರಣೆ ಮಾಡುವುದಾಗಿ ಹೇಳಿಕೊಂಡು ಜನರಿಗೆ ವಂಚಿಸುತ್ತಿದ್ದಾರೆ ಎಂಬ ಆರೋಪಗಳು ಈ ಹಿಂದೆಯೂ ಕೇಳಿಬಂದಿದ್ದವು. ಇದೀಗ ಮಹಿಳೆಯೊಂದಿಗೆ ಅಸಭ್ಯ ವರ್ತನೆ ಆರೋಪವೂ ಕೇಳಿಬಂದಿದ್ದು, ಘಟನೆ ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ.

Share News

About BigTv News

Check Also

ಇಬ್ಬರ ಜಗಳ ಬಿಡಿಸಲು ಹೋದ ಯುವಕನ ಕತ್ತು ಸೀಳಿ ಭೀಕರ ಕೊಲೆ!

ಮಂಡ್ಯ: ಹಣಕಾಸಿನ ವಿಚಾರವಾಗಿ ನಡೆಯುತ್ತಿದ್ದ ಗಲಾಟೆಯನ್ನು ಬಿಡಿಸಲು ಹೋದ 25 ವರ್ಷದ ನಂದನ್ ಎಂಬ ಯುವಕನನ್ನು ಡ್ರ್ಯಾಗರ್‌ನಿಂದ ಕತ್ತು ಸೀಳಿ …

Leave a Reply

Your email address will not be published. Required fields are marked *