Breaking News

ಬೆಂಗಳೂರು: ಕರ್ತವ್ಯನಿರತ ಮಹಿಳಾ ಪಿಎಸ್‌ಐ ಮೇಲೆ ಹಲ್ಲೆ; ಬಾಡಿ ಶೇಮಿಂಗ್ ಮಾಡಿದ ನಾಲ್ವರ ವಿರುದ್ಧ FIR

ಬೆಂಗಳೂರು: ಕರ್ತವ್ಯದಲ್ಲಿದ್ದ ಮಹಿಳಾ PSI ನಯನಾ ಅವರ ಮೇಲೆ ಹಲ್ಲೆ ನಡೆಸಿ, ಬಾಡಿ ಶೇಮಿಂಗ್ ಮಾಡಿದ ಆರೋಪ ಕೇಳಿಬಂದಿದೆ. ಭಟ್ಟರಹಳ್ಳಿ ಜಂಕ್ಷನ್ ಬಳಿ ಜಗಳ ಬಿಡಿಸಲು ತೆರಳಿದ್ದ ವೇಳೆ ಘಟನೆ ನಡೆದಿದೆ. ಆರೋಪಿಗಳು ನಯನಾ ಅವರನ್ನು ಅವಾಚ್ಯವಾಗಿ ನಿಂದಿಸಿ, ‘ಎಮ್ಮೆ ತರ ಇದ್ದೀಯಾ’ ಎಂದು ಅವಮಾನಿಸಿದ್ದಾರೆ ಎನ್ನಲಾಗಿದೆ. ಅಲ್ಲದೆ, ಸಸ್ಪೆಂಡ್ ಮಾಡಿಸುವುದಾಗಿ ಬೆದರಿಕೆ ಹಾಕಿದ್ದಾರೆ ಎಂಬ ಆರೋಪವೂ ಇದೆ. ಘಟನೆಯ ದೃಶ್ಯ ಬಾಡಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಹೇಮಂತ್ ರೆಡ್ಡಿ, ರಾಧಾಕೃಷ್ಣ ರೆಡ್ಡಿ, ಹರ್ಷಿತ್ ರೆಡ್ಡಿ ಹಾಗೂ ರಾಹುಲ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

Share News

About BigTv News

Check Also

ಆನ್‌ಲೈನ್ ಆಯಪ್‌ನಲ್ಲಿ ಸಾಲ ಪಡೆದ ಮಹಿಳೆಗೆ ಫೋಟೋ ಮಾರ್ಫಿಂಗ್ ಬೆದರಿಕೆ – ₹2.90 ಲಕ್ಷ ವಂಚನೆ!

ಮಂಗಳೂರು: ಆನ್‌ಲೈನ್ ಆಯಪ್ ಮೂಲಕ ಸಾಲ ಪಡೆದ ಮಹಿಳೆಯೊಬ್ಬರಿಗೆ ಫೋಟೋ ಮಾರ್ಫ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಸಿ ₹2.90 …

Leave a Reply

Your email address will not be published. Required fields are marked *