ಚಿಕ್ಕಬಳ್ಳಾಪುರ : ಜಿಲ್ಲೆಯ ಚಿಂತಾಮಣಿ ನಗರದ ಸೊಣ್ಣಶೆಟ್ಟಿಹಳ್ಳಿ ಬಡಾವಣೆಯಲ್ಲಿ ವರದಕ್ಷಿಣೆ ಕಿರುಕುಳ ಹಾಗೂ ಕೌಟುಂಬಿಕ ಕಲಹದಿಂದ ಮನನೊಂದ 26 ವರ್ಷದ ಮಮತಾಶ್ರೀ ಎಂಬ ಗೃಹಿಣಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ವರದಿಯಾಗಿದೆ. ಐದು ವರ್ಷಗಳ ಹಿಂದೆ ಮೋಹನ್ ರೆಡ್ಡಿ ಎಂಬುವವರೊಂದಿಗೆ ವಿವಾಹವಾಗಿದ್ದ ಈ ದಂಪತಿಗೆ ನಾಲ್ಕು ವರ್ಷದ ಗಂಡು ಮಗುವಿದೆ. ಕಳೆದ ಕೆಲ ದಿನಗಳಿಂದ ಪತಿ-ಪತ್ನಿ ನಡುವೆ ಉಂಟಾಗಿದ್ದ ವೈಮನಸ್ಸು ಹಾಗೂ ಕೌಟುಂಬಿಕ ಕಲಹದಿಂದ ನೊಂದಿದ್ದ ಮಮತಾಶ್ರೀ, ಸಾವಿಗೂ ಮುನ್ನ ಡೆತ್‌ನೋಟ್ ಬರೆದಿಟ್ಟಿದ್ದಾರೆ. ತಮ್ಮ ಮಗುವನ್ನು ಪೋಷಕರ ವಶಕ್ಕೆ ನೀಡಬೇಕು ಮತ್ತು ತಮ್ಮ ಅಂತ್ಯಸಂಸ್ಕಾರದಲ್ಲಿ ಪತಿ ಪಾಲ್ಗೊಳ್ಳಬಾರದು ಎಂದು ಡೆತ್‌ನೋಟ್‌ನಲ್ಲಿ ಬರೆದಿಟ್ಟಿರುವುದಾಗಿ ತಿಳಿದುಬಂದಿದೆ. ಮೃತರ ತಂದೆ ನೀಡಿದ ದೂರಿನ ಆಧಾರದ ಮೇರೆಗೆ ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

