Breaking News

ಶಿವಮೊಗ್ಗದಲ್ಲಿ ಎಣ್ಣೆ ಏಟಲ್ಲಿ, ಸ್ನೇಹಿತನಿಗೆ ರಾಡ್ ನಿಂದ ಥಳಿಸಿ, ಮೈಮೇಲೆ ನಿಂತು ಅಟ್ಟಹಾಸ ಮೆರೆದ ಭೂಪ!

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಗರ್ತಿಕೆರೆ ಬಳಿ ಮದ್ಯಪಾನ ಮಾಡುತ್ತಿದ್ದ ಸ್ನೇಹಿತರಿಬ್ಬರ ನಡುವೆ ಜಗಳ ನಡೆದು, ರಾಘವೇಂದ್ರ ಎಂಬಾತ ಮಂಜುನಾಥ್ ಮೇಲೆ ಕಬ್ಬಿಣದ ರಾಡ್‌ನಿಂದ ಹಲ್ಲೆ ನಡೆಸಿದ್ದಾನೆ. ರಕ್ತಸಿಕ್ತವಾಗಿ ಬಿದ್ದಿದ್ದ ಮಂಜುನಾಥನ ಎದೆಯ ಮೇಲೆ ಹತ್ತಿ ನಿಂತು ವಿಕೃತಿ ಮೆರೆದಿದ್ದಾನೆ. ಬಳಿಕ ಪ್ರಜ್ಞಾಹೀನನಾಗಿದ್ದ ಮಂಜುನಾಥನನ್ನು ಹೈವೇ ರಸ್ತೆಯಲ್ಲಿ ಎಳೆದುಕೊಂಡು ಹೋಗಲು ಯತ್ನಿಸಿದ್ದಾನೆ. ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ರಾಘವೇಂದ್ರನನ್ನು ಬಂಧಿಸಿದ್ದಾರೆ. ಗಂಭೀರವಾಗಿ ಗಾಯಗೊಂಡ ಮಂಜುನಾಥನನ್ನು ಶಿವಮೊಗ್ಗದ ಮೆಕ್‌ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ರಿಬ್ಬನ್ ಪೇಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

Share News

About BigTv News

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *