Breaking News

ಶಾರ್ಟ್ ಸರ್ಕ್ಯೂಟ್‌.. ಎಲೆಕ್ಟ್ರಿಕ್ ವಸ್ತುಗಳ ಗೋಡೌನ್‌ನಲ್ಲಿ ಭೀಕರ ಅಗ್ನಿ ಅವಘಡ

ಬೆಂಗಳೂರು ಕೆ.ಆರ್. ಪುರದ ಎನ್‌ಆರ್‌ಐ ಲೇಔಟ್‌ನಲ್ಲಿ ಎಲೆಕ್ಟ್ರಿಕ್ ಬೈಕ್‌ಗಳನ್ನು ನಿಲ್ಲಿಸಿದ್ದ ಗ್ಯಾರೇಜ್‌ಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡು ನೂರಾರು ಬೈಕ್‌ಗಳು ಸುಟ್ಟು ಕರಕಲಾಗಿವೆ. ಮಂಗಳವಾರ ರಾತ್ರಿ ಸುಮಾರು 9 ಗಂಟೆಗೆ ಘಟನೆ ನಡೆದಿದ್ದು, ಕ್ಷಣಾರ್ಧದಲ್ಲೇ ಬೆಂಕಿ ಇಡೀ ಗ್ಯಾರೇಜ್‌ಗೆ ವ್ಯಾಪಿಸಿದೆ. ಮಾಹಿತಿ ತಿಳಿಯುತ್ತಿದ್ದಂತೆ ಎರಡು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿ ಸತತ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದಿವೆ. ಬೆಂಕಿಯ ತೀವ್ರತೆಗೆ ಪಕ್ಕದಲ್ಲಿದ್ದ ಡಾ. ಸ್ಮಿತಾ ಕಿರಣ್ ಸ್ಪೆಷಾಲಿಟಿ ಹೆಲ್ತ್ ಕೇರ್‌ಗೂ ಹಾನಿಯಾಗಿದ್ದು, ಕಟ್ಟಡದ ಕೆಲ ಭಾಗಗಳು ಸುಟ್ಟುಹೋಗಿವೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಅಗ್ನಿಶಾಮಕ ಇಲಾಖೆ ಹಾಗೂ ಪೊಲೀಸರು ನಿಖರ ಕಾರಣ ಮತ್ತು ಸಂಭವಿಸಿರುವ ನಷ್ಟದ ಕುರಿತು ಪರಿಶೀಲನೆ ನಡೆಸುತ್ತಿದ್ದಾರೆ.

Share News

About BigTv News

Check Also

ಯುವತಿ ಕುತ್ತಿಗೆಗೆ ಚಾಕು ಇಟ್ಟು ಸರ ದರೋಡೆ ಯತ್ನ: ಕಿಡಿಗೇಡಿ ಬಂಧನ

ಬೆಂಗಳೂರು: ಇಂದಿರಾನಗರದ ಅಂಗಡಿಯೊಂದಕ್ಕೆ ನುಗ್ಗಿ ಯುವತಿಯ ಕುತ್ತಿಗೆಗೆ ಚಾಕು ಇಟ್ಟು ಚಿನ್ನದ ಸರ ದರೋಡೆಗೆ ಯತ್ನಿಸಿದ ಪ್ರಭುರಾಜ್ (40) ಎಂಬಾತನನ್ನು …

Leave a Reply

Your email address will not be published. Required fields are marked *