Breaking News

ಕೋಪದಲ್ಲಿ ಪತ್ನಿಯ ಹತ್ಯೆ, ತಾಯಿಗೆ ಕರೆ ಮಾಡಿ ಭಯದಲ್ಲಿ ತಾನೂ ಆತ್ಮಹತ್ಯೆಗೆ ಶರಣಾದ ಪತಿ

ಬೆಂಗಳೂರು ರಾಜಗೋಪಾಲನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬುಧವಾರ ರಾತ್ರಿ ಪತಿ-ಪತ್ನಿಯ ನಡುವಿನ ಜಗಳ ದುರಂತಕ್ಕೆ ತಿರುಗಿದೆ. ಸಿವಿಲ್ ಎಂಜಿನಿಯರ್ ಸುಮಂತ್ ಜೈನ್ ಹಾಗೂ ಸಾಫ್ಟ್‌ವೇರ್ ಎಂಜಿನಿಯರ್ ಪದ್ಮಾವತಿ ನಡುವೆ ಜಗಳ ನಡೆದಿದ್ದು, ಹಿಂಸಾತ್ಮಕ ಸ್ವರೂಪ ಪಡೆದಿದೆ ಎನ್ನಲಾಗಿದೆ. ಜಗಳದ ವೇಳೆ ಸುಮಂತ್ ಪತ್ನಿಯ ಮುಖಕ್ಕೆ ಹೊಡೆದು, ಬಳಿಕ ದಿಂಬಿನಿಂದ ಉಸಿರುಗಟ್ಟಿಸಿ ಕೊಂದಿರುವ ಆರೋಪ ಕೇಳಿಬಂದಿದೆ. ಘಟನೆ ಬಳಿಕ ಆತಂಕಗೊಂಡ ಸುಮಂತ್ ತಾಯಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ತಾಯಿ ಮನೆಯ ಮಾಲೀಕರಿಗೆ ವಿಷಯ ತಿಳಿಸಿದ್ದು, ಬಾಗಿಲು ತೆರೆದಾಗ ಸುಮಂತ್ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಪದ್ಮಾವತಿ ಕೂಡ ಮೃತಪಟ್ಟ ಸ್ಥಿತಿಯಲ್ಲಿ ಕಂಡುಬಂದಿದ್ದಾರೆ. ಮಾಹಿತಿ ತಿಳಿದು ಸ್ಥಳಕ್ಕೆ ಧಾವಿಸಿದ ರಾಜಗೋಪಾಲನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಪದ್ಮಾವತಿಯ ಸಾವಿಗೆ ನಿಖರ ಕಾರಣ ಸೇರಿದಂತೆ ಘಟನೆಯ ಸಂಪೂರ್ಣ ವಿವರಗಳನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ.

Share News

About BigTv News

Check Also

ಬೆಂಗಳೂರಿನಲ್ಲಿ ಮತ್ತೊಂದು ನಕಲಿ ಔಷಧ ಜಾಲ ಪತ್ತೆ, 90ಕ್ಕೂ ಹೆಚ್ಚು ಆಸ್ಪತ್ರೆಗಳಿಗೆ ಪೂರೈಕೆಯಾಗಿತ್ತು ಫೇಕ್ ಮೆಡಿಸಿನ್

ಬೆಂಗಳೂರು: ಮಿನರ್ವ್ ಸರ್ಕಲ್‌ನ ಕೃಪಾ ಹೆಲ್ತ್‌ಕೇರ್‌ ಮೇಲೆ ಎಸ್‌ಐಟಿ ಹಾಗೂ ಔಷಧ ನಿಯಂತ್ರಣ ಇಲಾಖೆ ಜಂಟಿಯಾಗಿ ದಾಳಿ ನಡೆಸಿ ನಕಲಿ …

Leave a Reply

Your email address will not be published. Required fields are marked *