ಗದಗ ನಗರದಲ್ಲಿ ಮಹಿಳೆ ಮೇಲೆ ಅತ್ಯಾಚಾರ ಎಸಗಿ, ಅಕ್ರಮವಾಗಿ ಗರ್ಭಪಾತ ಮಾಡಿಸಿದ ಆರೋಪದಡಿ ವೈದ್ಯ ಹಾಗೂ ಶುಶ್ರೂಷಕಿ ಸೇರಿದಂತೆ ಏಳು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಸಿಕಂದರ್ ಬೇಪಾರಿ ಹಾಗೂ ಭರತ ಕೊರವರ ಮಹಿಳೆ ಮೇಲೆ ಪ್ರತ್ಯೇಕವಾಗಿ ಅತ್ಯಾಚಾರ ಎಸಗಿದ್ದಾರೆ ಎನ್ನಲಾಗಿದೆ. ಮಹಿಳೆ ಗರ್ಭಿಣಿಯಾದ ಬಳಿಕ ಇತರ ಆರೋಪಿಗಳು ಸೇರಿ ಕಾನೂನುಬಾಹಿರವಾಗಿ ಗರ್ಭಪಾತ ಮಾಡಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಬಂಧಿತ ಏಳು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಪ್ರಕರಣಕ್ಕೆ ಸಹಕರಿಸಿದ ಇತರ ಆರೋಪಿಗಳಿಗಾಗಿ ಶೋಧ ಮುಂದುವರಿದಿದೆ. ಈ ಕುರಿತು ಗದಗ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದೇ ವೇಳೆ ಅಪರಾಧ ಕೃತ್ಯಗಳಲ್ಲಿ ತೊಡಗಿದ್ದ ಆರೋಪದಡಿ ರೌಡಿ ಶೀಟರ್ ಮಂಜುನಾಥ ಮಾಳೋತ್ತರನನ್ನು ಗದಗ ಜಿಲ್ಲೆಯಿಂದ ಚಿತ್ರದುರ್ಗ ಜಿಲ್ಲೆಗೆ ಗಡಿಪಾರು ಮಾಡಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

