ಬೆಂಗಳೂರು: ಕರ್ತವ್ಯನಿರತ ಮಹಿಳಾ PSI ಮೇಲೆ ಹಲ್ಲೆ ನಡೆಸಿ, ಬಾಡಿಶೇಮಿಂಗ್ ಮಾಡಿದ ಆರೋಪದ ಘಟನೆ ಕೆ.ಆರ್.ಪುರಂ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಭಟ್ಟರಹಳ್ಳಿ ಜಂಕ್ಷನ್‌ನಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರೊಂದಿಗೆ ಜಗಳ ಮಾಡುತ್ತಿದ್ದವರನ್ನು ನಿಯಂತ್ರಿಸಲು ತೆರಳಿದ್ದ PSI ನಯನಾ ಅವರ ಮೇಲೆ ಹೇಮಂತ್ ರೆಡ್ಡಿ, ರಾಧಾಕೃಷ್ಣ ರೆಡ್ಡಿ, ಹರ್ಷಿತ್ ರೆಡ್ಡಿ ಹಾಗೂ ರಾಹುಲ್ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಅಷ್ಟೇ ಅಲ್ಲದೆ, ಸಾರ್ವಜನಿಕರ ಎದುರೇ PSI ನಯನಾ ಅವರಿಗೆ ಅವಾಚ್ಯವಾಗಿ ಮಾತನಾಡಿ ಬಾಡಿಶೇಮಿಂಗ್ ಮಾಡಿದ್ದಾರೆ ಎಂಬ ಆರೋಪವೂ ಕೇಳಿಬಂದಿದೆ. ಘಟನೆಯ ದೃಶ್ಯಗಳು ಕರ್ತವ್ಯದಲ್ಲಿದ್ದ ಸಿಬ್ಬಂದಿಯ ಬಾಡಿವೋರ್ನ್ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಆರೋಪಿಗಳ ವಿರುದ್ಧ ಕೆ.ಆರ್.ಪುರಂ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ. ಇತ್ತೀಚೆಗಷ್ಟೇ ಮಂಡ್ಯದಲ್ಲಿ ಕರ್ತವ್ಯದಲ್ಲಿದ್ದ ಮಹಿಳಾ PSI ಸವಿತಾ ಬಿ. ಪಾಟೀಲ್ ಅವರ ಮೇಲೆ ಬಿಜೆಪಿ ಶಾಸಕ ಬಿ. ಸುರೇಶ್ ಗೌಡ ಅವರ ಪುತ್ರಿ ಐಶ್ವರ್ಯಾ ಹಲ್ಲೆ ನಡೆಸಿದ ಆರೋಪದ ಪ್ರಕರಣವೂ ಸುದ್ದಿಯಾಗಿತ್ತು. ಈ ಎರಡು ಘಟನೆಗಳ ಬೆನ್ನಲ್ಲೇ ಕರ್ತವ್ಯನಿರತ ಮಹಿಳಾ ಪೊಲೀಸ್ ಅಧಿಕಾರಿಗಳ ಸುರಕ್ಷತೆ ಹಾಗೂ ಗೌರವದ ಬಗ್ಗೆ ಪ್ರಶ್ನೆಗಳು ಎದ್ದಿವೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

