ಚಿತ್ರದುರ್ಗ: ಅನಾರೋಗ್ಯ ನಿವಾರಣೆ ಹಾಗೂ ವಾಮಾಚಾರದ ನೆಪದಲ್ಲಿ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ತಮ್ಮೇನಹಳ್ಳಿ ಮಠದ ಸ್ವಾಮೀಜಿಗೆ ಸಾರ್ವಜನಿಕರು ಹಲ್ಲೆ ನಡೆಸಿದ ಘಟನೆ ಬೆಳಕಿಗೆ ಬಂದಿದೆ.ಘಟನೆಗೆ ಸಂಬಂಧಿಸಿದ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಆರೋಪಕ್ಕೆ ಗುರಿಯಾಗಿರುವವರು ತಮ್ಮೇನಹಳ್ಳಿ ಮಠದ ಜಮ್ಮಣ್ಣ ಸ್ವಾಮೀಜಿ ಎಂದು ತಿಳಿದುಬಂದಿದೆ. ಮಾಹಿತಿಯ ಪ್ರಕಾರ, ಬಳ್ಳಾರಿ ಮೂಲದ ಮಹಿಳೆಯೊಬ್ಬರಿಗೆ ಅನಾರೋಗ್ಯ ನಿವಾರಣೆ ಮಾಡಿಕೊಡುವ ನೆಪದಲ್ಲಿ ಸ್ವಾಮೀಜಿ ಅಸಭ್ಯವಾಗಿ ವರ್ತಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ವಿಚಾರ ತಿಳಿದ ಮಹಿಳೆಯ ಕುಟುಂಬಸ್ಥರು ಮಠಕ್ಕೆ ನುಗ್ಗಿ ಸ್ವಾಮೀಜಿಯೊಂದಿಗೆ ವಾಗ್ವಾದ ನಡೆಸಿ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಈ ಘಟನೆ ಸುಮಾರು 15 ದಿನಗಳ ಹಿಂದೆ ನಡೆದಿದ್ದು, ಇದೀಗ ಅದರ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ ವ್ಯಾಪಕ ಚರ್ಚೆಗೆ ಕಾರಣವಾಗಿದೆ. ಸದ್ಯ ಪ್ರಕರಣದ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದ್ದು, ಆರೋಪಗಳ ಸಂಬಂಧ ಅಧಿಕಾರಿಗಳಿಂದ ಅಧಿಕೃತ ಮಾಹಿತಿ ಇನ್ನಷ್ಟೇ ಹೊರಬರಬೇಕಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

