ದಕ್ಷಿಣ ಕನ್ನಡ: ಕಡಬ ತಾಲೂಕಿನ ಕೋಲ್ಪೆಯಲ್ಲಿ ಯುವತಿ ಹಾಗೂ ಆಕೆಯ ಕುಟುಂಬದವರ ಮೇಲೆ ಗುಂಪೊಂದು ಹಲ್ಲೆ ನಡೆಸಿದ ಆರೋಪ ಕೇಳಿಬಂದಿದೆ. ಆಗಸ್ಟ್ 12ರಂದು ರಾತ್ರಿ ಯುವತಿ ತಾಯಿ ಜೊತೆ ಕಾರಿನಲ್ಲಿ ಮನೆಗೆ ತೆರಳುತ್ತಿದ್ದಾಗ ಕೆಲವರು ವಾಹನ ಅಡ್ಡಗಟ್ಟಿ ನೈತಿಕ ಪೊಲೀಸ್‌ಗಿರಿ ನಡೆಸಿದ್ದಾರೆ ಎನ್ನಲಾಗಿದೆ. ಯುವತಿಗೆ ಕಪಾಳಕ್ಕೆ ಹೊಡೆದು ಬೆದರಿಕೆ ಹಾಕಿದ್ದು, ಜಗಳ ಬಿಡಿಸಲು ಬಂದ ಜಮಾಲ್ ಮೇಲೂ ಹಲ್ಲೆ ನಡೆಸಲಾಗಿದೆ. ಬಳಿಕ ಅಕ್ಕನನ್ನು ಮೇಲೆತ್ತಲು ಬಂದ ಸಹೋದರಿ ಫಾಸಿಲಾಗೂ ಕಪಾಳಕ್ಕೆ ಹೊಡೆದು ದೂಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಸಂತ್ರಸ್ತೆ ನೀಡಿದ ದೂರಿನ ಆಧಾರದ ಮೇಲೆ ಜಾಬಿರ್, ಸಿದ್ದಿಕ್ ಸೇರಿದಂತೆ ಒಟ್ಟು 9 ಮಂದಿ ವಿರುದ್ಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ BNS ವಿವಿಧ ಸೆಕ್ಷನ್‌ಗಳಡಿ ಎಫ್‌ಐಆರ್ ದಾಖಲಾಗಿದೆ. ಗಾಯಗೊಂಡವರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

