ಬೆಂಗಳೂರು ಕೆ.ಆರ್. ಪುರಂ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವಿದ್ಯಾರ್ಥಿಯೊಬ್ಬನ ಮೇಲೆ ಪಿಎಸ್‌ಐ ದೌರ್ಜನ್ಯ ಎಸಗಿದ್ದಾರೆಂಬ ಆರೋಪ ಕೇಳಿಬಂದಿದೆ. ಭಟ್ಟರಹಳ್ಳಿ ಸಿಗ್ನಲ್ ಬಳಿ ಎರಡು ಕಾರುಗಳ ನಡುವೆ ಜಗಳ ನಡೆಯುತ್ತಿದ್ದ ವೇಳೆ, ಅದನ್ನು ಬಿಡಿಸಲು ಬಂದ ರಾಹುಲ್ ಎಂಬ ವಿದ್ಯಾರ್ಥಿಯ ಕಾಲರ್ ಹಿಡಿದು ಎಳೆದಾಡಿ ಕಪಾಳಕ್ಕೆ ಹೊಡೆದಿದ್ದಾರೆ ಎನ್ನಲಾಗಿದೆ. ಬಳಿಕ ಮೊಬೈಲ್ ಕಸಿದು ನೆಲಕ್ಕೆ ಅಪ್ಪಳಿಸಿ ಹಾನಿ ಮಾಡಿದ್ದಾರೆ ಎಂಬ ಆರೋಪವೂ ಇದೆ. ಘಟನೆಯ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಪಿಎಸ್‌ಐ ನಯನ ವಿರುದ್ಧ ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗಿದೆ. ಮತ್ತೊಂದೆಡೆ, ಪಿಎಸ್‌ಐ ನೀಡಿದ ದೂರಿನ ಆಧಾರದ ಮೇಲೆ ಹೇಮಂತ್ ರೆಡ್ಡಿ, ರಾಹುಲ್ ಸೇರಿದಂತೆ ನಾಲ್ವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಆದರೆ, ಯುವಕರು ನೀಡಿದ ದೂರನ್ನು ಎನ್‌ಸಿಆರ್‌ಗೆ ಸೀಮಿತಗೊಳಿಸಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಪೊಲೀಸರೇ ಸಾರ್ವಜನಿಕರ ಮೇಲೆ ದೌರ್ಜನ್ಯ ನಡೆಸಿದರೆ ನ್ಯಾಯ ಕೇಳುವುದು ಯಾರ ಬಳಿ? ಎಂದು ನೆಟ್ಟಿಗರು ಪ್ರಶ್ನಿಸಿದ್ದು, ಪ್ರಕರಣದ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

