Breaking News

ನಿವೃತ್ತ ಶಿಕ್ಷಕನ ಕೊಲೆ: ಮಗಳು ಸೇರಿ ಮೂವರ ವಿರುದ್ಧ ಪ್ರಕರಣ ದಾಖಲು

ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಚವಡಿಹಾಳ ರಸ್ತೆ ಬಳಿ ನಿವೃತ್ತ ಶಿಕ್ಷಕ ಸಿದ್ದಪ್ಪ ಬಸಣ್ಣ ಅಂಜುಟಗಿ (62) ಅವರನ್ನು ಹೊಡೆದು ಕೊಲೆ ಮಾಡಿರುವ ಘಟನೆ ನಡೆದಿದೆ. ಆಗಸ್ಟ್ 15ರ ರಾತ್ರಿ ಕೊಲೆ ನಡೆದಿದ್ದು, ಆಗಸ್ಟ್ 16ರಂದು ರಸ್ತೆ ಬದಿಯಲ್ಲಿ ಬೆಡ್‌ಶೀಟ್ ಹಾಗೂ ತಲೆದಿಂಬಿನ ಕವರ್‌ನಲ್ಲಿ ಸುತ್ತಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ಅಕ್ರಮ ಸಂಬಂಧಕ್ಕೆ ತಂದೆ ವಿರೋಧ ವ್ಯಕ್ತಪಡಿಸುತ್ತಿದ್ದ ಹಾಗೂ ಪಿಂಚಣಿ ಹಣ ನೀಡುತ್ತಿಲ್ಲ ಎಂಬ ಕಾರಣಕ್ಕೆ ಹಿರಿಯ ಮಗಳು ಪ್ರಿಯಾಂಕಾ ತನ್ನ ಪ್ರಿಯಕರ ಭೀಮಾಜಿ ಅಲಿಯಾಸ್ ಸಂತೋಷ್ ಜೊತೆ ಸೇರಿ ತಂದೆಯನ್ನು ಕೊಲೆ ಮಾಡಿದ್ದಾಳೆ ಎಂದು ಆರೋಪಿಸಲಾಗಿದೆ. ಈ ಸಂಬಂಧ ಪ್ರಿಯಾಂಕಾ, ಭೀಮಾಜಿ ಹಾಗೂ ಇತರರ ವಿರುದ್ಧ ಪ್ರಕರಣ ದಾಖಲಾಗಿದೆ. ಸಿದ್ದಪ್ಪರ ಕಿರಿಯ ಪುತ್ರಿ ನಿಖಿತಾ ನೀಡಿದ ದೂರಿನ ಆಧಾರದ ಮೇಲೆ ಇಂಡಿ ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಗಳಿಗಾಗಿ ತನಿಖೆ ಚುರುಕುಗೊಳಿಸಿದ್ದಾರೆ.

Share News

About BigTv News

Check Also

ಬೆಂಗಳೂರಲ್ಲಿ ನಕಲಿ ಡೇಟಿಂಗ್ ಬಲೆ, 20 ಲಕ್ಷ ರೂ. ಮೌಲ್ಯದ ಚಿನ್ನ ಲೂಟಿ

ಬೆಂಗಳೂರು: ಚಂದ್ರಾ ಲೇಔಟ್‌ನಲ್ಲಿ ಡೇಟಿಂಗ್ ಆಯಪ್ ಮೂಲಕ ಪರಿಚಯವಾದ ವ್ಯಕ್ತಿಯನ್ನು ಮನೆಗೆ ಕರೆಸಿಕೊಂಡ ಯುವಕನಿಗೆ ಚಾಕು ತೋರಿಸಿ ಬೆದರಿಸಿ, 226 …

Leave a Reply

Your email address will not be published. Required fields are marked *