Breaking News

ಅಮೈ: ಕೋಟ್ಯಂತರ ರೂ. ಮೌಲ್ಯದ ಮಾದಕವಸ್ತು ಸಾಗಣೆ; ಓರ್ವನ ಸೆರೆ

ಬಂಟ್ವಾಳದಲ್ಲಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಕಾರಿನಲ್ಲಿ ಕೋಟ್ಯಂತರ ರೂ. ಮೌಲ್ಯದ ಮಾದಕವಸ್ತು ಸಾಗಿಸುತ್ತಿದ್ದ ಆರೋಪಿಯನ್ನು ಬಂಧಿಸಿದ್ದಾರೆ. ಬೆಂಗಳೂರು ಕೆಂಗೇರಿ ನಿವಾಸಿ ಮಹಮ್ಮದ್ ಅಮೀರ್ ಜರ್ತಾಬ್ (35) ಬಂಧಿತನಾಗಿದ್ದು, ಆತನಿಂದ 538.63 ಗ್ರಾಂ ಎಂಡಿಎಂಎ ಹಾಗೂ 99.12 ಗ್ರಾಂ ಕೊಕೈನ್ ಸೇರಿ ಒಟ್ಟು ₹1.05 ಕೋಟಿ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಆ.15ರ ಮಧ್ಯರಾತ್ರಿ ಹಾಸನದಿಂದ ಮಂಗಳೂರು ಕಡೆಗೆ ಮಾದಕವಸ್ತು ಸಾಗಾಟವಾಗುತ್ತಿರುವ ಖಚಿತ ಮಾಹಿತಿ ಮೇರೆಗೆ ಕಡೇಶಿವಾಲಯ ಗ್ರಾಮದ ಅಮೈ ಬಳಿ ಪೊಲೀಸರು ಕಾರನ್ನು ತಡೆದು ಪರಿಶೀಲಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಆರೋಪಿಯ ವಿರುದ್ಧ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ವಿಚಾರಣೆ ನಡೆಯುತ್ತಿದೆ. ವಿಚಾರಣೆ ವೇಳೆ ಬೆಂಗಳೂರಿನಲ್ಲಿ ನೈಜೀರಿಯಾ ಮೂಲದ ಮಹಿಳೆಯೊಬ್ಬರು ಮಾದಕವಸ್ತು ನೀಡುತ್ತಿದ್ದು, ಅಲ್ಲಿಂದ ಮಂಗಳೂರಿಗೆ ಸಾಗಿಸುತ್ತಿದ್ದಾಗಿ ಆರೋಪಿ ಬಾಯ್ಬಿಟ್ಟಿದ್ದಾನೆ ಎನ್ನಲಾಗಿದೆ. ಹೀಗಾಗಿ ವಿದೇಶಿ ನಂಟಿನ ಜಾಲದ ಹಿಂದೆ ಇರುವವರ ಪತ್ತೆಗೆ ಪೊಲೀಸರು ತನಿಖೆ ಮುಂದುವರಿಸಿದ್ದು, ಆರೋಪಿಯ ವಿರುದ್ಧ ಈಗಾಗಲೇ ವಿವಿಧ ಠಾಣೆಗಳಲ್ಲಿ ಪ್ರಕರಣಗಳಿವೆ ಎನ್ನಲಾಗಿದೆ.

Share News

About BigTv News

Check Also

ಉಡುಪಿ: ಮದುವೆ ನಿರಾಕರಿಸಿದ ವ್ಯಕ್ತಿಯನ್ನು ಬೆದರಿಸಿ 42ಲಕ್ಷ ರೂ. ಹಣ ವಸೂಲಿ; ಶಿಕ್ಷಕಿ ಸಹಿತ ಇಬ್ಬರ ಬಂಧನ

ಉಡುಪಿ: ಮದುವೆ ಪ್ರಸ್ತಾಪ ನಿರಾಕರಿಸಿದ ವ್ಯಕ್ತಿಗೆ ಸುಳ್ಳು ಪ್ರಕರಣ ದಾಖಲಿಸುವುದಾಗಿ ಬೆದರಿಸಿ ₹42.97 ಲಕ್ಷ ವಸೂಲಿ ಮಾಡಿ ವಂಚಿಸಿದ ಆರೋಪದಲ್ಲಿ …

Leave a Reply

Your email address will not be published. Required fields are marked *