ಬೆಂಗಳೂರು: ಕರ್ತವ್ಯನಿರತ ಸಂಚಾರ ಪೊಲೀಸ್ ಕಾನ್ಸ್‌ಟೇಬಲ್‌ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಸರ್ಕಾರಿ ಕೆಲಸಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಅಲಿಯಾಸ್ ಗೊಟ್ಟಿಗೆರೆ ಮಂಜಣ್ಣ ವಿರುದ್ಧ ಹುಳಿಮಾವು ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ. ಆಗಸ್ಟ್ 16ರಂದು ಹುಳಿಮಾವು ಜಂಕ್ಷನ್‌ನಲ್ಲಿ ಸಂಚಾರ ನಿಯಂತ್ರಿಸುತ್ತಿದ್ದ ಕಾನ್ಸ್‌ಟೇಬಲ್ ಅರುಣ್ ಮಂಜಪ್ಪ ಅವರು ಮಂಜುನಾಥ್ ಅವರ ಕಾರನ್ನು ತಡೆದಿದ್ದಾರೆ. ಇದರಿಂದ ಕೋಪಗೊಂಡ ಮಂಜುನಾಥ್ ಹಾಗೂ ಅವರ ಬೆಂಬಲಿಗರು ಕಾನ್ಸ್‌ಟೇಬಲ್ ಜೊತೆ ವಾಗ್ವಾದ ನಡೆಸಿ, ಕೈಗಳನ್ನು ಹಿಡಿದು ಎಳೆದಾಡಿ ನಿಂದಿಸಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಮಂಜುನಾಥ್ ಅವರು ಹಿರಿಯ ಪೊಲೀಸ್ ಅಧಿಕಾರಿಯೊಂದಿಗೆ ಫೋನ್‌ನಲ್ಲಿ ಮಾತನಾಡುತ್ತಲೇ ಕಾನ್ಸ್‌ಟೇಬಲ್‌ಗೆ ಒದೆಯಲು ಯತ್ನಿಸಿದ ದೃಶ್ಯಗಳು ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಾಗಿವೆ ಎನ್ನಲಾಗಿದೆ. ಬಳಿಕ ಪೊಲೀಸರು ಮಧ್ಯಪ್ರವೇಶಿಸಿ ಪರಿಸ್ಥಿತಿ ತಿಳಿಗೊಳಿಸಿದ್ದು, ಪ್ರಕರಣದ ಕುರಿತು ನಿಷ್ಪಕ್ಷಪಾತ ತನಿಖೆ ನಡೆಸಿ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

