Breaking News

ಕೊಪ್ಪಳ ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಅಕ್ರಮ ಪ್ರಕರಣ: ಹೊರಗುತ್ತಿಗೆ ನೌಕರ ರವೀಂದ್ರ ಕುಮಾರ್‌ಗೆ ಪೊಲೀಸ್ ಬಲೆ

ಕೊಪ್ಪಳ: ಕೊಪ್ಪಳ ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (KUDA) ₹8.43 ಕೋಟಿ ಅಕ್ರಮ ವರ್ಗಾವಣೆಯಾಗಿರುವುದು ಆಡಿಟ್ ವೇಳೆ ಬಯಲಾಗಿದೆ. ಅಧ್ಯಕ್ಷರು ಹಾಗೂ ಸದಸ್ಯರಿಲ್ಲದ ಅವಧಿಯಲ್ಲಿ ಪ್ರಾಧಿಕಾರದ ಹೆಸರಿನಲ್ಲಿ ಅನಧಿಕೃತ ಬ್ಯಾಂಕ್ ಖಾತೆಗಳನ್ನು ತೆರೆದು ಹಣ ವರ್ಗಾಯಿಸಲಾಗಿದೆ ಎಂಬ ಆರೋಪ ಕೇಳಿಬಂದಿದೆ. 2022-23ರ ಅವಧಿಯಲ್ಲಿ ಹಾಗೂ ನಂತರ ಸುಮಾರು ಒಂದೂವರೆ ವರ್ಷಗಳ ಕಾಲ ಅಧ್ಯಕ್ಷರ ನೇಮಕವಾಗಿರಲಿಲ್ಲ. ಇದೇ ಸಮಯದಲ್ಲಿ ಕೊಪ್ಪಳದ ವಿವಿಧ ಬ್ಯಾಂಕ್‌ಗಳಲ್ಲಿ ನಕಲಿ ಖಾತೆಗಳನ್ನು ತೆರೆದು ₹8.43 ಕೋಟಿ ವರ್ಗಾವಣೆ ಮಾಡಲಾಗಿದೆ ಎನ್ನಲಾಗಿದ್ದು, ಇದರ ಹಿಂದೆ ದೊಡ್ಡ ಜಾಲವಿರುವ ಶಂಕೆ ವ್ಯಕ್ತವಾಗಿದೆ. ಪ್ರಕರಣದಲ್ಲಿ ಹೊರಗುತ್ತಿಗೆ ನೌಕರ ರವೀಂದ್ರ ಕುಮಾರ್ ಪ್ರಮುಖ ಆರೋಪಿಯಾಗಿದ್ದು, ಸದ್ಯ ಪರಾರಿಯಾಗಿದ್ದಾನೆ. ನಕಲಿ ಖಾತೆ ಸೃಷ್ಟಿ ಹಾಗೂ ಹಣ ವರ್ಗಾವಣೆಯಲ್ಲಿ ಇತರರ ಪಾತ್ರವಿದೆಯೇ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದು, ರವೀಂದ್ರ ಕುಮಾರ್ ಬಂಧನಕ್ಕೆ ಬಲೆ ಬೀಸಿದ್ದಾರೆ.

Share News

About BigTv News

Check Also

80s ಫೋಟೋ ಟ್ರೆಂಡ್‌ನಲ್ಲೂ ಸೈಬರ್ ವಂಚಕರ ಕನ್ನ: ಹಣ ಕೊಡದಿದ್ದಕ್ಕೆ ಬೆತ್ತಲೆ ಫೋಟೋ ಹರಿಬಿಟ್ಟ ವಂಚಕರು

ಬೆಂಗಳೂರು ಉತ್ತರ ತಾಲೂಕಿನ ಬಾಗಲಗುಂಟೆಯ ವಿನೋದ್ (45) ಎಂಬುವರು 80ರ ದಶಕದ ಶೈಲಿಯಲ್ಲಿ ಫೋಟೋ ಎಡಿಟ್ ಮಾಡಲು ನಕಲಿ ಆ್ಯಪ್ …

Leave a Reply

Your email address will not be published. Required fields are marked *