ಬಂಟ್ವಾಳ: ಪುಂಜಾಲಕಟ್ಟೆ ಠಾಣಾ ವ್ಯಾಪ್ತಿಯ ತೆಂಕಕಜೆಕಾರು ಉದ್ದದ ಗುಡ್ಡೆಯಲ್ಲಿ 82 ವರ್ಷದ ವೃದ್ಧೆಯ ಎರಡು ಚಿನ್ನದ ಬಳೆಗಳನ್ನು ಬಲವಂತವಾಗಿ ಎಳೆದುಕೊಂಡು ಹೋಗಿದ್ದ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ವೃದ್ಧೆಯ ಮೊಮ್ಮಗ ಶಬೀರ್ (33) ಎಂಬಾತನನ್ನು ಬಂಧಿಸಲಾಗಿದೆ. ಆ.14ರಂದು ಅವ್ವಮ್ಮ ಮನೆಯಲ್ಲಿ ಒಬ್ಬಂಟಿಯಾಗಿದ್ದಾಗ ಮುಖಕ್ಕೆ ಬಟ್ಟೆ ಸುತ್ತಿಕೊಂಡು ಬಂದಿದ್ದ ವ್ಯಕ್ತಿ, ಅವರ ಕೈಯಲ್ಲಿದ್ದ ಸುಮಾರು ₹5 ಲಕ್ಷ ಮೌಲ್ಯದ 40 ಗ್ರಾಂ ತೂಕದ ಎರಡು ಚಿನ್ನದ ಬಳೆಗಳನ್ನು ಬಲವಂತವಾಗಿ ಕಿತ್ತುಕೊಂಡು ಪರಾರಿಯಾಗಿದ್ದ. ಈ ವೇಳೆ ವೃದ್ಧೆಯ ಕೈಗೆ ಗಾಯವಾಗಿತ್ತು. ತನಿಖೆ ನಡೆಸಿದ ಪೊಲೀಸರು ಆ.16ರಂದು ಆರೋಪಿ ಶಬೀರ್‌ನನ್ನು ಬಂಧಿಸಿ, ಕಳವು ಮಾಡಿದ್ದ ಎರಡೂ ಚಿನ್ನದ ಬಳೆಗಳನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿಯನ್ನು ವಿಚಾರಣೆ ನಡೆಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

