ಭಟ್ಕಳ: ಕಂಪನಿ ನೀಡಿದ್ದ ಸ್ವಾತಂತ್ರ್ಯೋತ್ಸವ ರಜೆಯಲ್ಲಿ ಮುರುಡೇಶ್ವರಕ್ಕೆ ಬಂದಿದ್ದ ಹುಬ್ಬಳ್ಳಿ ಹಾಗೂ ಗದಗ ಮೂಲದ ಆರು ಮಂದಿ ಗಾಂಜಾ ಸೇವಿಸಿ ಪೊಲೀಸರ ಅತಿಥಿಯಾಗಿದ್ದಾರೆ. ಮುರುಡೇಶ್ವರದ ವಿವಿಧೆಡೆ ಗಾಂಜಾ ಸೇವಿಸಿ ಕೆಲವರು ಅನುಚಿತವಾಗಿ ವರ್ತಿಸುತ್ತಿದ್ದರು ಎನ್ನಲಾಗಿದೆ. ಮಾಹಿತಿ ಆಧರಿಸಿ ಸ್ಥಳಕ್ಕೆ ಧಾವಿಸಿದ ಪೊಲೀಸರು ಆರು ಮಂದಿಯನ್ನು ವಶಕ್ಕೆ ಪಡೆದು ತಾಲೂಕು ಆಸ್ಪತ್ರೆಗೆ ಕರೆದೊಯ್ದು ವೈದ್ಯಕೀಯ ಪರೀಕ್ಷೆ ನಡೆಸಿದ್ದಾರೆ. ಪರೀಕ್ಷೆಯಲ್ಲಿ ಮಾದಕ ವಸ್ತು ಸೇವಿಸಿರುವುದು ದೃಢಪಟ್ಟಿದೆ. ಈ ಸಂಬಂಧ ಆರು ಮಂದಿಯ ವಿರುದ್ಧ ಮೂರು ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

