Breaking News

ಟ್ರಾಫಿಕ್ ಪೊಲೀಸ್ ಮೇಲೆ ಹಲ್ಲೆ ಪ್ರಕರಣ, ಜೆಡಿಎಸ್​​​​ನ ಗೊಟ್ಟಿಗೆರೆ ಮಂಜುಗೆ ಜಾಮೀನು

ಬೆಂಗಳೂರು: ಕರ್ತವ್ಯನಿರತ ಸಂಚಾರ ಪೊಲೀಸ್ ಸಿಬ್ಬಂದಿಯೊಂದಿಗೆ ಗಲಾಟೆ ನಡೆಸಿ ಹಲ್ಲೆಗೆ ಯತ್ನಿಸಿದ ಆರೋಪದಡಿ ಬಂಧನಕ್ಕೊಳಗಾಗಿದ್ದ ಜೆಡಿಎಸ್ ಮುಖಂಡ ಗೊಟ್ಟಿಗೆರೆ ಮಂಜುಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಹುಳಿಮಾವು ಸಂಚಾರ ಠಾಣಾ ವ್ಯಾಪ್ತಿಯಲ್ಲಿ ವಾಹನ ದಟ್ಟಣೆ ನಿಯಂತ್ರಿಸುತ್ತಿದ್ದ ಪೊಲೀಸ್ ಸಿಬ್ಬಂದಿ ಅರುಣ್, ಮಂಜು ಅವರ ಕಾರನ್ನು ತಡೆದಿದ್ದರು. ಇದನ್ನು ಪ್ರಶ್ನಿಸಿದ ಮಂಜು ವಾಗ್ವಾದಕ್ಕಿಳಿದು, ಸಿಬ್ಬಂದಿಯ ಕಾಲರ್ ಹಿಡಿದು ಹಲ್ಲೆಗೆ ಯತ್ನಿಸಿದ್ದಾರೆ ಎನ್ನಲಾಗಿದೆ. ಘಟನೆಯ ದೃಶ್ಯಗಳು ಮೊಬೈಲ್‌ನಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದವು. ಸಿಬ್ಬಂದಿ ನೀಡಿದ ದೂರಿನ ಮೇರೆಗೆ ಎಫ್‌ಐಆರ್ ದಾಖಲಿಸಿದ್ದ ಪೊಲೀಸರು, ಬಂಧನದ ಭೀತಿಯಿಂದ ತಲೆಮರೆಸಿಕೊಂಡಿದ್ದ ಮಂಜುನಾಥ್ ಅವರನ್ನು ಖಾಸಗಿ ಹೋಟೆಲ್‌ನಲ್ಲಿ ಬಂಧಿಸಿದ್ದರು. ಬಳಿಕ ನ್ಯಾಯಾಂಗ ಬಂಧನಕ್ಕೆ ಹಾಜರುಪಡಿಸಲಾಗಿದ್ದು, ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಜಾಮೀನು ನೀಡಿ ಆದೇಶಿಸಿದೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *