ಮಧುಗಿರಿ: ತಾಲೂಕಿನ ಕಸಿನಾಯಕನಹಳ್ಳಿ ಗೇಟ್ ಬಳಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಮೂವರನ್ನು ಕೊಡಿಗೇನಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಜಿಲಾನ್ (30), ಕಲ್ಯಾಣಕುಮಾರ್ (27) ಹಾಗೂ ಚರಣ್ (26) ಬಂಧಿತ ಆರೋಪಿಗಳು. ಮಧುಗಿರಿ-ಹಿಂದೂಪುರ ಮುಖ್ಯ ರಸ್ತೆಯ ಕಸಿನಾಯಕನಹಳ್ಳಿ ಗೇಟ್ ಬಳಿ ಸಾರ್ವಜನಿಕರು ಹಾಗೂ ಗ್ರಾಹಕರಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ಬಗ್ಗೆ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ ಮೂವರನ್ನೂ ವಶಕ್ಕೆ ಪಡೆದು ಗಾಂಜಾ ಜಪ್ತಿ ಮಾಡಿದ್ದಾರೆ. ಬಂಧಿತ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಪ್ರಕರಣದ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

