ಚಿಕ್ಕಬಾಣವಾರದಲ್ಲಿ ಮನೆಯಲ್ಲಿ ನಿಗೂಢವಾಗಿ ಮೃತಪಟ್ಟ ತಂದೆ-ಮಗನ ಪ್ರಕರಣಕ್ಕೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಪತಿ ಅಭಿನಂದನ್ ಹಾಗೂ ಆರು ವರ್ಷದ ಮಗ ಯದುವೀರ್ ಸಾವಿನ ಹಿಂದೆ ಪತ್ನಿ ಹರಿಣಿ ಹಾಗೂ ಆಕೆಯ ಪ್ರಿಯಕರ ವಿನಯ್ ಕೈವಾಡವಿದೆ ಎಂದು ಪೊಲೀಸ್ ತನಿಖೆಯಲ್ಲಿ ತಿಳಿದುಬಂದಿದೆ. ಪೊಲೀಸರ ಪ್ರಕಾರ, ಘಟನೆ ನಡೆದ ರಾತ್ರಿ ಹರಿಣಿ ಮನೆಯ ಸಿಸಿ ಕ್ಯಾಮೆರಾಗಳನ್ನು ಆಫ್ ಮಾಡಿ ವಿನಯ್‌ನನ್ನು ಮನೆಗೆ ಕರೆಸಿಕೊಂಡಿದ್ದಳು. ಬಳಿಕ ಇಬ್ಬರೂ ಸೇರಿ ಸೌಟ್‌ನಿಂದ ಅಭಿನಂದನ್ ತಲೆಗೆ ಹೊಡೆದು ಕೊಲೆ ಮಾಡಿದ್ದಾರೆ ಎನ್ನಲಾಗಿದೆ. ಈ ದೃಶ್ಯವನ್ನು ಬಾಲಕ ಯದುವೀರ್ ನೋಡಿದ್ದರಿಂದ, ಪ್ರಕರಣ ಬಯಲಾಗುವ ಭಯದಲ್ಲಿ ಆತನನ್ನೂ ಕೊಲೆ ಮಾಡಲಾಗಿದೆ ಎಂದು ವಿಚಾರಣೆ ವೇಳೆ ಹರಿಣಿ ಮಾಹಿತಿ ನೀಡಿದ್ದಾಳೆ ಎನ್ನಲಾಗಿದೆ. ಬಳಿಕ ತಂದೆ-ಮಗ ಮಲಗಿದ್ದ ಸ್ಥಳದಲ್ಲೇ ಮೃತಪಟ್ಟಿರುವಂತೆ ಮೃತದೇಹಗಳನ್ನು ಇರಿಸಲಾಗಿತ್ತು ಎನ್ನಲಾಗಿದೆ. ಸದ್ಯ ಹರಿಣಿ ಹಾಗೂ ವಿನಯ್ ವಿರುದ್ಧ ಪೊಲೀಸರು ತನಿಖೆ ಮುಂದುವರಿಸಿದ್ದು, ಕೊಲೆಗೆ ನಿಖರ ಕಾರಣವೇನು ಹಾಗೂ ಕೃತ್ಯದಲ್ಲಿ ಇನ್ನೂ ಯಾರಾದರೂ ಭಾಗಿಯಾಗಿದ್ದಾರೆಯೇ ಎಂಬ ಬಗ್ಗೆ ಪರಿಶೀಲನೆ ನಡೆಸುತ್ತಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

