Breaking News

ಗಾಂಜಾ ಮಾರಾಟ ಯತ್ನ; ಇಬ್ಬರ ಬಂಧನ

ಮಂಗಳೂರು: ಮಾರಾಟ ಮಾಡುವ ಉದ್ದೇಶದಿಂದ ಸ್ಕೂಟರ್‌ನಲ್ಲಿ ಗಾಂಜಾ ಸಾಗಿಸುತ್ತಿದ್ದ ಇಬ್ಬರನ್ನು ಬಜಪೆ ಠಾಣೆ ಪೊಲೀಸರು ಬಂಧಿಸಿದ್ದಾರೆ. ಪೊಳಲಿ ದ್ವಾರದ ಬಳಿ ವಾಹನ ತಪಾಸಣೆ ವೇಳೆ ತಪ್ಪಿಸಿಕೊಳ್ಳಲು ಯತ್ನಿಸಿದ ರಕ್ಷಿತ್ (23) ಹಾಗೂ ಅಕ್ಷಯ್ ಬಿ. (23) ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ. ಆರೋಪಿಗಳಿಂದ ಸುಮಾರು 1 ಕೆಜಿ 124 ಗ್ರಾಂ ಗಾಂಜಾ, ಡಿಜಿಟಲ್ ತೂಕದ ಯಂತ್ರ, ಜಿಪ್‌ಲಾಕ್ ಕವರ್‌ಗಳು, ಎರಡು ಮೊಬೈಲ್‌ಗಳು ಹಾಗೂ ಸ್ಕೂಟರ್ ವಶಪಡಿಸಿಕೊಳ್ಳಲಾಗಿದೆ. ವಿಚಾರಣೆ ವೇಳೆ ಮಾರಿಪಳ್ಳದ ಶಾಕೀರ್ ಎಂಬಾತನಿಂದ ಗಾಂಜಾ ಖರೀದಿಸಿದ್ದಾಗಿ ಆರೋಪಿಗಳು ತಿಳಿಸಿದ್ದಾರೆ ಎನ್ನಲಾಗಿದೆ. ಈ ಸಂಬಂಧ ಬಜಪೆ ಪೊಲೀಸ್ ಠಾಣೆಯಲ್ಲಿ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಗಾಂಜಾ ಪೂರೈಕೆ ಮಾಡುತ್ತಿದ್ದ ಶಾಕೀರ್‌ಗಾಗಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Share News

About BigTv News

Check Also

ಪೊಲೀಸರ ಮೇಲೆಯೇ ಹಲ್ಲೆ ಆರೋಪ.. ಗಂಟೆಗಳು ಕಳೆದರೂ FIR ಇಲ್ಲ!

ಪೊಲೀಸರ ಮೇಲೆಯೇ ಕೈ ಎತ್ತಿದ ಪುಂಡರು.. ಪ್ರಕರಣ ದಾಖಲಿಸಲು ಪೊಲೀಸರಿಗೆ ಇಷ್ಟೊಂದು ವಿಳಂಬವೇಕೆ…? ಪೊಲೀಸರ ಮೇಲೆಯೇ ಹಲ್ಲೆ ಮಾಡುವಷ್ಟು ಬೆಳೆದ …

Leave a Reply

Your email address will not be published. Required fields are marked *