Breaking News

ಬೆಂಗಳೂರು | ಕಟ್ಟಡ ಕಾಮಗಾರಿ ಸ್ಥಳದಲ್ಲಿ ಜಿಲೆಟಿನ್‌ ಕಡ್ಡಿ ಪತ್ತೆ: ಇಬ್ಬರ ಬಂಧನ

ಬೆಂಗಳೂರು: ಬೆಳ್ಳಂದೂರು ಸಮೀಪದ ಭೋಗನಹಳ್ಳಿಯ ನಿರ್ಮಾಣ ಹಂತದ ಕಟ್ಟಡ ಕಾಮಗಾರಿ ಸ್ಥಳದಲ್ಲಿ ಸುಮಾರು 800 ಕೆ.ಜಿ. ಜಿಲೆಟಿನ್ ಕಡ್ಡಿಗಳು ಪತ್ತೆಯಾಗಿದ್ದು, ನಾಲ್ವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಅರುಣ್‌ಕುಮಾರ್, ಜಗನ್, ಪ್ರಭಾಕರ್ ಹಾಗೂ ಆದರ್ಶ್ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, ಇಬ್ಬರನ್ನು ಬಂಧಿಸಲಾಗಿದೆ ಎನ್ನಲಾಗಿದೆ. ಕಲ್ಲಿನ ಬಂಡೆಗಳನ್ನು ತೆರವುಗೊಳಿಸಲು ಸುರಕ್ಷತಾ ಕ್ರಮಗಳಿಲ್ಲದೆ ಜಿಲೆಟಿನ್ ಕಡ್ಡಿ ಬಳಸಿ ಸ್ಫೋಟಿಸಲಾಗುತ್ತಿತ್ತು ಎಂದು ಸ್ಥಳೀಯರು ಆರೋಪಿಸಿದ್ದಾರೆ. ಶಾಲೆಯ ಸಮೀಪವೇ ಸ್ಫೋಟಕ ವಸ್ತುಗಳನ್ನು ಬಳಸಲಾಗುತ್ತಿದ್ದು, ಇದರಿಂದ ಮಕ್ಕಳು ಆತಂಕದಲ್ಲಿದ್ದಾರೆ ಎಂದು ದೂರಿದ್ದಾರೆ. ಸ್ಫೋಟಕ ವಸ್ತುಗಳ ಕಾಯ್ದೆ ಹಾಗೂ ಬಿಎನ್‌ಎಸ್‌ನ ವಿವಿಧ ಸೆಕ್ಷನ್‌ಗಳಡಿ ಬೆಳ್ಳಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಕ್ರಮವಾಗಿ ಸ್ಫೋಟಕ ವಸ್ತುಗಳನ್ನು ಸಂಗ್ರಹಿಸಿ ಬಳಸಿದ ಆರೋಪದ ಬಗ್ಗೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *