Breaking News

ಕಲಬುರ್ಗಿಯಲ್ಲಿ ಬೆಚ್ಚಿ ಬೀಳಿಸೋ ಘಟನೆ : ಪತಿಯನ್ನು ಕೊಡಲಿಯಿಂದ ಹೊಡೆದು ಕೊಂದ ಪತ್ನಿ!

ಕಲಬುರಗಿ: ಪತಿ-ಪತ್ನಿ ನಡುವಿನ ಕೌಟುಂಬಿಕ ಜಗಳ ತೀವ್ರ ವಿಕೋಪಕ್ಕೆ ತಿರುಗಿ, ಕೋಪಗೊಂಡ ಪತ್ನಿಯೇ ಕೊಡಲಿಯಿಂದ ಹಲ್ಲೆ ನಡೆಸಿ ಪತಿಯನ್ನು ದಾರುಣವಾಗಿ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಕಾಳಗಿ ತಾಲೂಕಿನ ಕೋಡ್ಲಿ ಗ್ರಾಮದಲ್ಲಿ ನಡೆದಿದೆ. ಮೂಲತಃ ಸೇಡಂ ತಾಲೂಕಿನ ಯಡ್ಡಳ್ಳಿ ಗ್ರಾಮದ ನಿವಾಸಿಯಾದ ನಾಗೇಂದ್ರ ಮುಧೋಳ (35) ಕೊಲೆಯಾದ ದುರ್ದೈವಿ. ಪ್ರಕರಣಕ್ಕೆ ಸಂಬಂಧಿಸಿದಂತೆ ಆತನ ಪತ್ನಿ ಸುಧಾರಾಣಿ ಮುಧೋಳ (30) ಎಂಬವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.ಪತಿಯ ತವರೂರನ್ನು ಬಿಟ್ಟು ಪತ್ನಿಯ ತವರೂರಾದ ಕೋಡ್ಲಿ ಗ್ರಾಮಕ್ಕೆ ಬಂದಿದ್ದ ನಾಗೇಂದ್ರ, ಕುಟುಂಬ ಸಮೇತ ನೆಲೆಸಿ ಕುರಿ ಮೇಯಿಸುವ ಕೆಲಸ ಮಾಡುತ್ತಿದ್ದ. ಆದರೆ, ಈತನಿಗೆ ಮದ್ಯ ಸೇವನೆಯ ಭಾರಿ ಚಟ ಅಂಟಿಕೊಂಡಿತ್ತು. ನಿತ್ಯ ಕುಡಿದು ಬಂದು ಮನೆಯಲ್ಲಿ ಗಲಾಟೆ ಮಾಡುತ್ತಿದ್ದ ನಾಗೇಂದ್ರ, ಕೌಟುಂಬಿಕ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಈ ಹಿಂದೆ ಹಲವು ಬಾರಿ ಜೈಲಿಗೂ ಹೋಗಿ ಬಂದಿದ್ದ ಎಂದು ತಿಳಿದುಬಂದಿದೆ. ರವಿವಾರ ರಾತ್ರಿಯೂ ಪತಿ-ಪತ್ನಿ ನಡುವೆ ಕೌಟುಂಬಿಕ ವಿಚಾರವಾಗಿ ಮತ್ತೆ ದೊಡ್ಡ ಮಟ್ಟದ ಗಲಾಟೆ ನಡೆದಿದೆ. ಈ ವೇಳೆ ನಾಗೇಂದ್ರ ತನ್ನ ಆರು ಹಾಗೂ ಎಂಟು ವರ್ಷದ ಇಬ್ಬರು ಗಂಡು ಮಕ್ಕಳನ್ನು ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ. ಇದರಿಂದ ತೀವ್ರ ಕೋಪ ಹಾಗೂ ಆತಂಕಗೊಂಡ ಸುಧಾರಾಣಿ, ಕೊಡಲಿಯಿಂದ ಪತಿಯ ಮೇಲೆ ಹಲ್ಲೆ ನಡೆಸಿದ್ದಾಳೆ. ತೀವ್ರವಾಗಿ ಗಾಯಗೊಂಡ ನಾಗೇಂದ್ರ ರಕ್ತಸ್ರಾವದಿಂದ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾನೆ. ಘಟನೆಯ ನಂತರ ಪತ್ನಿ ಸುಧಾರಾಣಿ ರಾತ್ರಿ ಗಸ್ತಿನಲ್ಲಿದ್ದ ಪೊಲೀಸರ ಬಳಿ ತೆರಳಿ ಶರಣಾಗಿದ್ದು, ಕೃತ್ಯವೆಸಗಿರುವುದಾಗಿ ಒಪ್ಪಿಕೊಂಡಿದ್ದಾಳೆ.

Share News

About BigTv News

Check Also

6ನೇ ತರಗತಿ ಮೇಲೆ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿ ಬಂಧನ

ಮುಂಡಗೋಡ: ಆರನೇ ತರಗತಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಗರ್ಭಿಣಿಯನ್ನಾಗಿಸಿದ ಆರೋಪದ ಮೇಲೆ 65 ವರ್ಷದ ಇಸ್ಮಾಯಿಲ್ ಹುಲಗೂರ …

Leave a Reply

Your email address will not be published. Required fields are marked *