Breaking News

ಬಾಯಿಗೆ ಮಣ್ಣು ಹಾಕಿಕೊಂಡು ಬಿಜೆಪಿ ಕಾರ್ಯಕರ್ತರಿಂದ ವಿನೂತನ ಹೋರಾಟ!-

ಮಂಡ್ಯದಲ್ಲಿ ಕಾವೇರಿ ನೀರು ವಿವಾದಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಹಾಗೂ CWMA ವಿರುದ್ಧ ವಿನೂತನ ಪ್ರತಿಭಟನೆ ನಡೆಯಿತು. ಬಿಜೆಪಿ ಕಾರ್ಯಕರ್ತ ಶಿವಕುಮಾರ್ ಆರಾಧ್ಯ ಮಣ್ಣನ್ನು ತಿನ್ನುವ ಮೂಲಕ ಆಕ್ರೋಶ ವ್ಯಕ್ತಪಡಿಸಿ, ಸರ್ಕಾರ ರೈತರ ಬಾಯಿಗೆ ಮಣ್ಣು ಹಾಕಿದೆ ಎಂದು ಕಿಡಿಕಾರಿದರು. ಸರ್ ಎಂ. ವಿಶ್ವೇಶ್ವರಯ್ಯ ಪ್ರತಿಮೆ ಆವರಣದಲ್ಲಿ ನಡೆದ ಪ್ರತಿಭಟನೆಯಲ್ಲಿ ನೂರಾರು ಕಾರ್ಯಕರ್ತರು ಭಾಗವಹಿಸಿ, ತಮಿಳುನಾಡಿಗೆ ನೀರು ಹರಿಸುವುದನ್ನು ವಿರೋಧಿಸಿ ಘೋಷಣೆ ಕೂಗಿದರು. ರಾಜ್ಯದ ಜಲಾಶಯಗಳಲ್ಲಿ ನೀರು ಕಡಿಮೆಯಾಗುತ್ತಿರುವಾಗ ರೈತರ ಹಿತ ಕಡೆಗಣಿಸಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇದರ ನಡುವೆ ತಮಿಳುನಾಡಿಗೆ ಪ್ರತಿದಿನ 12 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ CWMA ನೀಡಿರುವ ಸೂಚನೆಯನ್ನು ಜಾರಿಗೊಳಿಸುವಂತೆ ಸುಪ್ರೀಂ ಕೋರ್ಟ್ ಕರ್ನಾಟಕಕ್ಕೆ ಸೂಚಿಸಿದೆ. ನೀರಿನ ಕೊರತೆಯಿಂದ ಕುಡಿಯುವ ನೀರು ಹಾಗೂ ಕೃಷಿ ಮೇಲೆ ಪರಿಣಾಮ ಬೀರುವ ಆತಂಕವನ್ನು ಕರ್ನಾಟಕ ವ್ಯಕ್ತಪಡಿಸಿದೆ.

Share News

About BigTv News

Check Also

ಯುವತಿ ಕುತ್ತಿಗೆಗೆ ಚಾಕು ಇಟ್ಟು ಸರ ದರೋಡೆ ಯತ್ನ: ಕಿಡಿಗೇಡಿ ಬಂಧನ

ಬೆಂಗಳೂರು: ಇಂದಿರಾನಗರದ ಅಂಗಡಿಯೊಂದಕ್ಕೆ ನುಗ್ಗಿ ಯುವತಿಯ ಕುತ್ತಿಗೆಗೆ ಚಾಕು ಇಟ್ಟು ಚಿನ್ನದ ಸರ ದರೋಡೆಗೆ ಯತ್ನಿಸಿದ ಪ್ರಭುರಾಜ್ (40) ಎಂಬಾತನನ್ನು …

Leave a Reply

Your email address will not be published. Required fields are marked *