Breaking News

ಸ್ನ್ಯಾಪ್ ಚಾಟ್​​ನ ಮೂಲಕ ಪರಿಚಯ, ಪ್ರೀತಿ! ಗಂಡ-ಮಗನ ಹತ್ಯೆ ಹಿಂದಿನ ಸ್ಪೋಟಕ ವಿಚಾರ ರಿವೀಲ್

ಬೆಂಗಳೂರು: ಸ್ನ್ಯಾಪ್‌ಚಾಟ್ ಮೂಲಕ ಪರಿಚಯವಾಗಿ ಪ್ರೀತಿಗೆ ತಿರುಗಿದ ಸಂಬಂಧವೇ ತಂದೆ-ಮಗನ ಹತ್ಯೆಗೆ ಕಾರಣವಾಗಿದೆ ಎನ್ನಲಾಗಿದೆ. ಹರಿಣಿ ಹಾಗೂ ವಿನಯ್ ಎರಡು ವರ್ಷಗಳ ಹಿಂದೆ ಪರಿಚಯವಾಗಿದ್ದು, ಬಳಿಕ ಇಬ್ಬರ ನಡುವೆ ಅಕ್ರಮ ಸಂಬಂಧ ಬೆಳೆದಿತ್ತು ಎಂದು ತನಿಖೆಯಲ್ಲಿ ತಿಳಿದುಬಂದಿದೆ. 2021ರಲ್ಲಿ ಹರಿಣಿ ಹಾಗೂ ಅಭಿನಂದನ್ ಮದುವೆಯಾಗಿದ್ದರು. ಆದರೆ ದಾಂಪತ್ಯದಲ್ಲಿ ಹೊಂದಾಣಿಕೆ ಇರಲಿಲ್ಲ ಎನ್ನಲಾಗಿದ್ದು, ವಿನಯ್ ಜೊತೆ ಹೋಗಲು ಹರಿಣಿ ಪತಿಗೆ ವಿಚ್ಛೇದನ ನೀಡುವಂತೆ ಕೇಳುತ್ತಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ. ಕೊಲೆಗೂ ಮುನ್ನ ವಿನಯ್ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡು ಬಂದಿದ್ದ ಎನ್ನಲಾಗಿದ್ದು, ಕೃತ್ಯದ ಬಳಿಕವೂ ಫೋನ್ ಆಫ್ ಮಾಡಿಕೊಂಡು ತೆರಳಿದ್ದಾನೆ. ಪ್ರಕರಣದ ಪ್ರಮುಖ ಆರೋಪಿ ವಿನಯ್‌ಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ ಎಂದು ಡಿಸಿಪಿ ನಾಗೇಶ್ ತಿಳಿಸಿದ್ದಾರೆ.

Share News

About BigTv News

Check Also

ಚಿನ್ನ ಖರೀದಿಸಲು ಬಂದವನಂತೆ ನಾಟಕವಾಡಿ ₹13 ಲಕ್ಷದ ಆಭರಣ ಎಗರಿಸಿದ ಖದೀಮ! ಕನ್ನಡಿಯಲ್ಲಿ ಮುಖ ನೋಡುತ್ತಲೇ ಮಾಲೀಕರಿಗೆ ಪಂಗನಾಮ

ಬೆಂಗಳೂರು: ಚಿನ್ನಾಭರಣ ಖರೀದಿಸುವ ನೆಪದಲ್ಲಿ ಜ್ಯುವೆಲ್ಲರಿ ಅಂಗಡಿಗೆ ಬಂದ ವ್ಯಕ್ತಿಯೊಬ್ಬ ₹13.20 ಲಕ್ಷ ಮೌಲ್ಯದ ಚಿನ್ನ ಕಳವು ಮಾಡಿದ್ದಾನೆ. ಪ್ರಕರಣಕ್ಕೆ …

Leave a Reply

Your email address will not be published. Required fields are marked *